ಬೆಂಗಳೂರು: ‘ದಾವಣಗೆರೆ ಉಪ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಹಿಜಾಬ್ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಪಕ್ಷದಿಂದ ದೂರ ಸರಿಯುತ್ತಿರುವ ಮುಸ್ಲಿಮರ ಓಲೈಕೆಗೆ ಮುಂದಾಗಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

‘ಇವರು ಅಧಿಕಾರಕ್ಕೆ ಬಂದು 3 ವರ್ಷ ಹಿಜಾಬ್ ವಿಷಯದಲ್ಲಿ ಏನು ಮಾಡುತ್ತಿದ್ದರು? ದಾವಣೆಗೆರೆಯಲ್ಲಿ ಮುಸ್ಲಿಮರು ಮತ ಚಲಾಯಿಸಿದ ರೀತಿಗೆ ಗಾಬರಿಯಾಗಿದ್ದಾರೆ. ಮೇ 16ರಂದು ನಡೆಯುವ ಮುಸ್ಲಿಂ ಸಮಾವೇಶಕ್ಕೆ ಹೆದರಿ ಇಂತಹ ನಿರ್ಧಾರ ಮಾಡಿದ್ದಾರೆ’ ಎಂದು ದೂರಿದರು. ‘ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ್ದನ್ನು ಸಮರ್ಥನೆ ಮಾಡಲು ಆಗುತ್ತದೆಯೇ? ಎಲ್ಲವನ್ನು ರಾಜಕೀಯಕ್ಕಾಗಿ ಮಾಡುತ್ತಿ ದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಲಾಭ ಬಿಟ್ಟರೆ ಸಮಾಜದ ಶಾಂತಿ ಮುಖ್ಯವಲ್ಲ’ ಎಂದು ಟೀಕಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-1640396749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.