ದಾವಣಗೆರೆ: ‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮತದಾನದ ದಿನವೂ ದಕ್ಷಿಣ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರದಲ್ಲಿ ತೊಡಗುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ಅವರು ಚುನಾವಣಾಧಿಕಾರಿಗೆ ಗುರುವಾರ ದೂರು ನೀಡಿದ್ದಾರೆ.

‘ಉತ್ತರ ಕ್ಷೇತ್ರದ ಶಾಸಕರೂ ಆಗಿರುವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ದಕ್ಷಿಣ ಕ್ಷೇತ್ರದ ಬೇತೂರು ರಸ್ತೆ, ಬಾಷಾ ನಗರ, ಗಾಂಧಿನಗರ ಸೇರಿದಂತೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದಾರೆ. ಈ ಮೂಲಕ ಅನ್ಯ ಕ್ಷೇತ್ರಗಳ ರಾಜಕೀಯ ಮುಖಂಡರು ಮತದಾನ ನಡೆಯುವ ಕ್ಷೇತ್ರದಲ್ಲಿ ಇರಬಾರದು ಎಂಬ ನಿಯಮವನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ವಾರ್ಡ್ಗಳಲ್ಲಿನ ಸಿ.ಸಿ. ಟಿವಿ ಕ್ಯಾಮೆರಾ ಪರಿಶೀಲಿಸಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಕೀಲರ ಮೂಲಕ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದೇವೆ’ ಎಂದು ಯಶವಂತರಾವ್ ಜಾಧವ್ ತಿಳಿಸಿದ್ದಾರೆ.

‘ಸಚಿವರು ಕಾನೂನು ಉಲ್ಲಂಘಿಸಿ ಅತಿಕ್ರಮವಾಗಿ ದಕ್ಷಿಣ ಕ್ಷೇತ್ರದ ಬೂತ್ಗಳಿಗೆ ಭೇಟಿ ನೀಡಿರುವ ಬಗ್ಗೆ ದೂರು ನೀಡಲು ತೆರಳಿದ್ದಾಗ ಚುನಾವಣಾಧಿಕಾರಿ ಕಚೇರಿಯ ಬಾಗಿಲಿಗೆ ಬೀಗ ಹಾಕಲಾಗಿತ್ತು’ ಎಂದು ಯಶವಂತರಾವ್ ಜಾಧವ್ ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-302591307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.