ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಹಣ ಬಲ ಹಾಗೂ ಕೌಟುಂಬಿಕ ರಾಜಕಾರಣದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ಥಿರಗೊಳ್ಳುತ್ತಿದ್ದು, ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ಎಚ್ಚೆತ್ತುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.

‘ಶಿವಶಂಕರಪ್ಪ ಅವರು ಕೊನೆಯುಸಿರು ಇರುವವರೆಗೂ ಶಾಸಕರಾಗಿದ್ದರು. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸದ್ಯ ಸಚಿವರಾಗಿದ್ದಾರೆ. ಇವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸದರಾಗಿದ್ದಾರೆ. ಈ ದಂಪತಿಯ ಪುತ್ರ ಸಮರ್ಥ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದರು.

‘ಉಪಚುನಾವಣೆಯಲ್ಲಿ ಒಂದು ವೇಳೆ ಸಮರ್ಥ್ ಗೆದ್ದರೆ ಮುಂದಿನ ನಾಲ್ಕು ದಶಕಗಳ ಕಾಲ ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಕಾಂಗ್ರೆಸ್ನಲ್ಲಿ ಸಮರ್ಥ ಹೊರತುಪಡಿಸಿ ಬೇರೆ ಅಭ್ಯರ್ಥಿಗಳು ಇಲ್ಲವೇ’ ಎಂದು ಪ್ರಶ್ನಿಸಿದರು.

‘ಭ್ರಷ್ಟಾಚಾರ ಹಾಗೂ ವ್ಯಾಪಾರದ ಮೂಲಕ ಗಳಿಸಿದ ಹಣ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕಲು ಬಳಕೆಯಾಗುತ್ತಿದೆ. ಒಂದೇ ಕುಟುಂಬದಲ್ಲಿ ಅಧಿಕಾರ ಕೇಂದ್ರೀಕರಣವಾಗುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಇದೇ ಕಾರಣಕ್ಕೆ ದೇಶದಲ್ಲಿ ಕಾಂಗ್ರೆಸ್ ತನ್ನ ಹಿಡಿತ ಕಳೆದುಕೊಂಡಿದೆ. ಮತದಾರರು ಹಕ್ಕು ಚಲಾವಣೆ ಮಾಡುವ ಮೊದಲು ಆಲೋಚಿಸಬೇಕು’ ಎಂದು ಮನವಿ ಮಾಡಿದರು.

‘ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಲೋಕಸಭಾ ಸದಸ್ಯರು. ಪ್ರಿಯಾಂಕಾ ಗಾಂಧಿ ಅವರು ಮಗನಿಗಾಗಿ ಲೋಕಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. ಅದೇ ರೀತಿಯ ಸ್ಥಿತಿ ದಾವಣಗೆರೆಯಲ್ಲಿದೆ. ಒಂದೇ ಕುಟುಂಬಕ್ಕೆ ಎಲ್ಲಾ ರಾಜಕೀಯ ಸ್ಥಾನಗಳು ಏಕೆ ಬೇಕು?’ ಎಂದು ಶಾಮನೂರು ಕುಟುಂಬವನ್ನು ಸೋನಿಯಾ ಗಾಂಧಿ ಕುಟುಂಬಕ್ಕೆ ಹೋಲಿಸಿದರು.

‘ವಂಶಪಾರಂಪರ್ಯ ರಾಜಕಾರಣ, ಅಲ್ಪಸಂಖ್ಯಾತರ ಓಲೈಕೆ ಮತ್ತು ಭ್ರಷ್ಟಾಚಾರದ ಪರಿಣಾಮವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಕುಸಿದಿದೆ. 23 ವರ್ಷಗಳಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಜಿ.ಎಂ. ಸಿದ್ದೇಶ್ವರ ಅವರು ಸಂಸದರಾಗಿದ್ದಾಗ ‘ಸ್ಮಾರ್ಟ್ ಸಿಟಿ’ ಯೋಜನೆ ಅನುಷ್ಠಾನಗೊಂಡಿತು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನಗರದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿವೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-44-1760773360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.