ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆಗೆ ಬುಧವಾರ ನಗರಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 10.45ಕ್ಕೆ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ನಾಗನೂರು, ಶಿರಮಗೊಂಡನಹಳ್ಳಿ, 6ನೇ ಮೈಲಿಕಲ್ಲು, ಹಳೆ ಬೆಳವನೂರು, ತುರ್ಚಘಟ್ಟ, ಹೊಸ ನಾಯಕನಹಳ್ಳಿಗಳಲ್ಲಿ ರೋಡ್ ಷೋ ನಡೆಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಹದಡಿ ಗ್ರಾಮದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ 4.10ಕ್ಕೆ ಬೆಂಗಳೂರಿಗೆ ತೆರಳುವ ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆ 11.15ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ದುರ್ಗಾಂಬಿಕಾ ದೇಗುಲಕ್ಕೆ ತೆರಳಿ ದೇವಿ ದರ್ಶನ ಪಡೆದು ಮತಯಾಚನೆ ಆರಂಭಿಸಲಿದ್ದಾರೆ. ಶಿವಾಜಿ ವೃತ್ತ, ಮದಕರಿ ನಾಯಕ ವೃತ್ತ, ದೊಡ್ಡಪೇಟೆ, ಚೌಕಿಪೇಟೆ, ರಿಂಗ್ ರಸ್ತೆ, ಬಾಷಾ ನಗರ ಸೇರಿದಂತೆ ವಿವಿಧೆಡೆ ರೋಡ್ ಶೋ ನಡೆಸಲಿದ್ದಾರೆ. ಅಕ್ತರ್ ರಾಜಾ ವೃತ್ತದಲ್ಲಿ ಸಂಜೆ 7ಕ್ಕೆ ಬಹಿರಂಗ ಸಭೆ ನಡೆಸಿ ವಾಸ್ತವ್ಯ ಹೂಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.