ದಾವಣಗೆರೆ: ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಪರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಇಡೀ ದಿನ ಮತಯಾಚನೆ ನಡೆಸಿದರು.

ನಗರದ ಕಾಯಿಪೇಟೆ ಬಸವೇಶ್ವರ ದೇವಸ್ಥಾನ ರಸ್ತೆ, ವಿಜಯಲಕ್ಷ್ಮಿ ರಸ್ತೆ, ದೊಡ್ಡಪೇಟೆ, ಹೊಂಡದ ವೃತ್ತದಲ್ಲಿ ರ್ಯಾಲಿ ನಡೆಸಿದರು. ಸಾಮಾನ್ಯ ಕುಟುಂಬದಿಂದ ಬಂದಿರುವ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

‘ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಕೋರಿದರು.

ಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಭಾಗವಾಗಿ ಆರ್ಯ ವೈಶ್ಯ ಸಂಘ ಸಂಸ್ಥೆಗಳ ಸಮೂಹವು ಆಯೋಜಿಸಿದ್ದ ‘ಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನ’ ಸಮಾರಂಭವನ್ನು ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಪರವಾಗಿ ಮತಯಾಚಿಸಿದರು.

ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಶಾಸಕ ಸಿ.ಸಿ.ಪಾಟೀಲ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ನಾಗಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಮುಖಂಡರಾದ ಯಶವಂತರಾವ್ ಜಾಧವ, ಅಜಯ್ ಕುಮಾರ್, ಶಿವಕುಮಾರ್, ವಿಜೇಂದ್ರ ಡಿ.ಟಿ., ವೀರೇಶ್, ಶಿವಪ್ರಕಾಶ, ನಾಗಪ್ರಕಾಶ್ ಹಾಗೂ ಸಮುದಾಯದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-44-1302230095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.