ದಾವಣಗೆರೆ: ‘ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳಂ ವಿಧಾನಸಭೆ ಚುನಾವಣೆ ವೇಳೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕೆಲವು ಮತದಾರರನ್ನು ಕೈಬಿಡಲಾಗಿದೆ. ಇದರಿಂದಾಗಿ ಚುನಾವಣಾ ಫಲಿತಾಂಶದಲ್ಲೂ ವ್ಯತ್ಯಾಸವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ನೋಡಿಕೊಳ್ಳಬೇಕು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದರು.

‘ಅರ್ಹರ ಹೆಸರು ಕೈಬಿಟ್ಟು ಹೋಗದಂತೆ ಸಚಿವರು, ಸಂಸದರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಬಡವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಸಲುವಾಗಿ ಎಸ್ಐಆರ್ ಮೂಲಕ ದೊಡ್ಡ ಸಂಚು ನಡೆಸಲಾಗಿದೆ. ಎಸ್ಐಆರ್ ಪ್ರಕ್ರಿಯೆ ಮುಗಿಯುವವರೆಗೂ ಎಚ್ಚರಿಕೆಯಿಂದ ಇರುವಂತೆ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತದೆ’ ಎಂದರು.

‘ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪ್ರತಿಯೊಬ್ಬರೂ ತಮ್ಮ ವಿವರ ಸಲ್ಲಿಸಬೇಕು. ಇಲ್ಲವಾದರೆ ಮತದಾನದ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ. ಬಡವರು ಮತದಾನದ ಹಕ್ಕು ಕಳೆದುಕೊಂಡರೆ ಪಿಂಚಣಿ, ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಬದ್ಧತೆಯೊಂದಿಗೆ ಕೆಲಸ ಮಾಡುತ್ತದೆ’ ಎಂದು ಹೇಳಿದರು.

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಗೆ ಅನುಕೂಲವಾಗುವ ರೀತಿ ಮತದಾರರ ಪಟ್ಟಿ ಪರಿಷ್ಕರಿಸುತ್ತಿರುವ ಆರೋಪವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಜಾಸತ್ತಾತ್ಮಕವಲ್ಲದ, ಅವೈಜ್ಞಾನಿಕ ಪ್ರಕ್ರಿಯೆಯಿಂದ ರಾಜ್ಯದ ಮತದಾರರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ, ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗಿದೆ’ ಎಂದರು.

ಕಾಂಗ್ರೆಸ್ ಪಕ್ಷದ ಇಂಟೆಕ್ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ, ಗ್ಯಾರಂಟಿ ಸಮಿತಿ ಸದಸ್ಯ ಎಂ.ಕೆ.ಲಿಯಾಖತ್ ಅಲಿ, ಮುಖಂಡರಾದ ಡಿ.ಶಿವಕುಮಾರ, ಬಿ.ಎಸ್.ಸುರೇಶ ಹಾಗೂ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-43-94223101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.