ಚೆನ್ನೈ: ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಮತ ವಿಭಜನೆ ಮಾಡಬಹುದೇ ಹೊರತು, ಬಹುಮತ ಸಾಧಿಸುವ ಸಾಮರ್ಥ್ಯ ಹೊಂದಿಲ್ಲ ಎಂದು ಡಿಎಂಕೆ ಮಿತ್ರಪಕ್ಷ ವಿದುತಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಮುಖ್ಯಸ್ಥ ಥೋಲ್. ತಿರುಮಾವಲವನ್ ಅವರು ಹೇಳಿದ್ದಾರೆ.

ಇದರೊಂದಿಗೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪ್ರಬಲ ಪೈಪೋಟಿ ಒಡ್ಡಲಿದೆ ಎಂಬ ವಾದವನ್ನು ತಳ್ಳಿ ಹಾಕಿದ್ದಾರೆ.

ಟಿವಿಕೆಯು ಡಿಎಂಕೆ ವಿರೋಧಿ ಮತ್ತು ಎಐಎಡಿಎಂಕೆ ವಿರೋಧ ಮತಗಳನ್ನು ತನ್ನತ್ತ ಸೆಳೆಯಬಹುದು. ಆದರೆ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಡಿಎಂಕೆ ಮತ್ತು ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಮೀರಿ, ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲಾರದು ಎಂದು ವಿಸಿಕೆ ಮುಖ್ಯಸ್ಥ ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಡೆಸಿರುವ ಹಲವು ಸಂಸ್ಥೆಗಳು ತಮಿಳುನಾಡಿನಲ್ಲಿ ಈ ಬಾರಿಯೂ ಡಿಎಂಕೆ ಸರ್ಕಾರ ರಚನೆಯಾಗಲಿದೆ ಎಂದಿವೆ. ಎಐಎಡಿಎಂಕೆ ಮಿತ್ರಕೂಟಕ್ಕೆ ಅಧಿಕಾರ ಸಿಗಬಹುದು ಎಂದು ಕೆಲವು ಸಂಸ್ಥೆಗಳು ಅಂದಾಜಿಸಿವೆ. ಆದರೆ, ಆಕ್ಸಿಸ್ ಮೈ ಇಂಡಿಯಾ, ಅಚ್ಚರಿಯ ಭವಿಷ್ಯ ನುಡಿದಿದ್ದು, ಟಿವಿಕೆ 98–120 ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ. ಇದೇ ವಿಚಾರವಾಗಿ ತಿರುಮಾವಲವನ್ ಅವರು ಹೇಳಿಕೆ ನೀಡಿದ್ದಾರೆ.

234 ಸದಸ್ಯ ಬಲ ಹೊಂದಿರುವ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23ರಂದು ಮತದಾನ ನಡೆದಿದೆ. ರಾಜ್ಯದ ಸುಮಾರು 62 ಕೇಂದ್ರಗಳಲ್ಲಿ, ಮೇ 4ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ಸದ್ಯ ಅಧಿಕಾರದಲ್ಲಿರುವ ಡಿಎಂಕೆ ಮೈತ್ರಿಕೂಟ ಮತ್ತು ವಿರೋಧ ಪಕ್ಷ ಎಐಎಡಿಎಂಕೆ ಮಿತ್ರ ಪಕ್ಷಗಳ ನಡುವೆ ಪೈಪೋಟಿದೆ. ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕೂಡ ಪೈಪೋಟಿಯಲ್ಲಿದೆ.
.ರೈತರ ಸಾಲಮನ್ನಾ ಸೇರಿ ಹಲವು ಘೋಷಣೆ ಮಾಡಿದ ಟಿವಿಕೆ ಮುಖ್ಯಸ್ಥ, ನಟ ವಿಜಯ್ .Tamil Nadu Election: ಡಿಎಂಕೆ ಭದ್ರಕೋಟೆಗೆ ನುಗ್ಗುವ ಧೈರ್ಯ ಮಾಡಿದ್ದೇಕೆ ವಿಜಯ್?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.