ದೊಡ್ಡಬಳ್ಳಾಪುರ: 2028ಕ್ಕೆ ರಾಜ್ಯದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷದವರು ಎಸ್ಐಆರ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ತಪ್ಪು ಎಂದು ಹೇಳುವುದಾದರೆ ಪ್ರಜಾಪ್ರಭುತ್ವಕ್ಕೆ ಮಹತ್ವವೇ ಇರುವುದಿಲ್ಲ. ಅರ್ಹರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿದರೆ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುವ ಅಧಿಕಾರ ಪ್ರತಿಯೊಬ್ಬ ಪ್ರಜೆಗೂ ಇದೆ. ಆದರೆ ಕಾಂಗ್ರೆಸ್ ಪಕ್ಷದವರು ಜನರಲ್ಲಿ ಗೊಂದಲ ಮೂಡಿಸುವ ಸಲುವಾಗಿಯೇ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ದೇಶದಲ್ಲಿ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಕ್ಕೆ ಕೊರತೆ ಇಲ್ಲ, ಬೆಲೆಯು ಕಡಿಮೆ ಇದೆ. ದೇಶದಲ್ಲಿ ಬಿಜೆಪಿ ಪಕ್ಷದ ಆಡಳಿತ ಇರುವ ರಾಜ್ಯಗಳಲ್ಲಿ ಅಲ್ಲಿನ ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ತೆರಿಗೆಗಳನ್ನು ಕಡಿತ ಮಾಡಿ ಇಂಧನ ಬೆಲೆ ಏರಿಕೆಯಾಗುವುದನ್ನು ತಡೆದಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-16-1819256964

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.