ಚಿಕ್ಕಬಳ್ಳಾಪುರ: ಐದು ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ದೊರೆತ ಅಭೂತಪೂರ್ವ ಗೆಲುವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಅಭಿವೃದ್ಧಿ ಕಾರ್ಯಕ್ಕೆ ಜನರು ನೀಡಿರುವ ಮೆಚ್ಚುಗೆ ಹಾಗೂ ಕಾಂಗ್ರೆಸ್ ಸೇರಿದಂತೆ ಇಂಡಿ ಕೂಟಕ್ಕೆ ಜನರ ಕಪಾಳಮೋಕ್ಷ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಿಂದಲೇ ಇಂಡಿ ಕೂಟವನ್ನು ರಚಿಸಿಕೊಂಡ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಬಿಜೆಪಿಯ ಕಡೆಗಿನ ಜನರ ಒಲವನ್ನು ಛಿದ್ರಗೊಳಿಸಲು ನೋಡಿದ್ದವು. ಆದರೆ ಇಂಡಿ ಕೂಟ ಎನ್ನುವುದೇ ಅತಿ ದೊಡ್ಡ ವಿಫಲ ಹೆಜ್ಜೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿಯ ದುರಾಡಳಿತದಿಂದ ಬೇಸತ್ತ ಜನರು ಎನ್ಡಿಎ ಬೆಂಬಲಿಸಿದ್ದಾರೆ. ತಮಿಳುನಾಡಿನಲ್ಲಿ ಎಂ.ಕೆ.ಸ್ಟಾಲಿನ್ ತಂಡಕ್ಕೆ ತೀವ್ರ ಮುಖಭಂಗವಾಗಿದೆ. ಎಐಎಡಿಎಂಕೆ ನೇತೃತ್ವದ ಎನ್ಡಿಎ ಕೂಟಕ್ಕೆ ಅಭೂತಪೂರ್ವ ವಿಜಯ ಸಿಕ್ಕಿದೆ. ಅಸ್ಸಾಂ ಹಾಗೂ ಪುದುಚೇರಿಯಲ್ಲೂ ಕಮಲ ಅರಳಿದೆ ಎಂದಿದ್ದಾರೆ.

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಫಲಿತಾಂಶ ಬಂದು ಕಾಂಗ್ರೆಸ್ ಆಡಳಿತ ಕೊನೆಯಾಗಲಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-18-1036141225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.