ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖಾಮುಖಿ | ರತ್ನಗಿರಿ–ಸಿಂಧುದುರ್ಗ: ನಾರಾಯಣ ರಾಣೆ vs ವಿನಾಯಕ ರಾವುತ್‌

Published 2 ಮೇ 2024, 1:10 IST
Last Updated 2 ಮೇ 2024, 1:10 IST
ಅಕ್ಷರ ಗಾತ್ರ

ನಾರಾಯಣ ರಾಣೆ (ಬಿಜೆಪಿ)

ಮಹಾರಾಷ್ಟ್ರದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ರತ್ನಗಿರಿ–ಸಿಂಧುದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಅಖಾಡಕ್ಕಿಳಿಸಿದೆ. 2019ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ನಾರಾಯಣ ರಾಣೆ ಅವರ ಪುತ್ರ ನಿಲೇಶ್‌ ರಾಣೆ ಅವರು ಮಹಾರಾಷ್ಟ್ರ ಸ್ವಾಭಿಮಾನ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರು ಲೋಕಸಭಾ ಚುನಾವಣೆಗೆ ಇದೇ ಮೊದಲ ಬಾರಿ ಸ್ಪರ್ಧಿಸುತ್ತಿದ್ದಾರೆ. ಬಾಳ್ ಠಾಕ್ರೆ ಅವರ ಶಿವಸೇನಾದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದ ರಾಣೆ ಅವರು ಹಲವು ವರ್ಷಗಳ ಕಾಲ ಈ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದರು. 2005ರಲ್ಲಿ ಉದ್ಧವ್‌ ಠಾಕ್ರೆ ಮತ್ತು ಇವರ ನಡುವೆ ಒಡಕು ಮೂಡಿತ್ತು. ಅನಂತರ ಇವರನ್ನು ಶಿವಸೇನಾದಿಂದ ಉಚ್ಚಾಟಿಸಲಾಗಿತ್ತು. ಬಳಿಕ ಇವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. 2017ರಲ್ಲಿ ಮಹಾರಾಷ್ಟ್ರ ಸ್ವಾಭಿಮಾನ ಪಕ್ಷವನ್ನು ಸ್ಥಾಪಿಸಿದ್ದರು. ಅನಂತರ ಅದನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಿದ್ದರು. 

ವಿನಾಯಕ ರಾವುತ್‌ (ಶಿವಸೇನಾ ಉದ್ಧವ್ ಠಾಕ್ರೆ ಬಣ)

ರತ್ನಗಿರಿ–ಸಿಂಧುದುರ್ಗ ಲೋಕಸಭಾ ಕ್ಷೇತ್ರದಿಂದ ಕಳೆದೆರಡು ಚುನಾವಣೆಗಳಲ್ಲಿ ಗೆದ್ದಿದ್ದ ವಿನಾಯಕ ರಾವುತ್‌ ಅವರನ್ನೇ ಶಿವಸೇನಾ ಉದ್ಧವ್ ಠಾಕ್ರೆ ಬಣವು ಈ ಬಾರಿ ಕಣಕ್ಕಿಳಿಸಿದೆ. 2019ರ ಚುನಾವಣೆಯಲ್ಲಿ ವಿನಾಯಕ ಅವರು 1,78,322 ಮತಗಳ ಅಂತರದಿಂದ ಮಹಾರಾಷ್ಟ್ರ ಸ್ವಾಭಿಮಾನ ಪಕ್ಷದಿಂದ ಸ್ಪರ್ಧಿಸಿದ್ದ ನಿಲೇಶ್‌ ರಾಣೆ ಅವರನ್ನು ಪರಾಭವಗೊಳಿಸಿದ್ದರು. ಉದ್ಧವ್‌ ಠಾಕ್ರೆ ಅವರ ಆಪ್ತರಾಗಿರುವ ವಿನಾಯಕ ಅವರು ಈ ಹಿಂದೆ ವಿಲೇಪಾರ್ಲೆ ಕ್ಷೇತ್ರದ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಮಹಾರಾಷ್ಟ್ರದ ವಿಧಾನ ಪರಿಷತ್‌ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಶಿವಸೇನಾ ಉದ್ಧವ್‌ ಠಾಕ್ರೆ ಬಣವು ‘ಇಂಡಿಯಾ’ ಒಕ್ಕೂಟದ ಜೊತೆಗಿರುವುದು ವಿನಾಯಕ ಅವರ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿದೆ. ಶಿವಸೇನಾವು ಇಬ್ಭಾಗವಾಗಿರುವುದರಿಂದ ಕ್ಷೇತ್ರದ ಜನರು ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT