ಗದಗ: ‘ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಇದೇ ವರ್ಷ ನಡೆಯಲಿದ್ದು, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದೇನೆ’ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುಧೀಂದ್ರ ದೇಶಪಾಂಡೆ ಹೇಳಿದರು.

‘2022ರಲ್ಲಿ ನಡೆದ ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿದ್ದೆ. ಪಕ್ಷ ಅಂತಿಮಗೊಳಿಸಿದ್ದ ಮೂವರು ವ್ಯಕ್ತಿಗಳಲ್ಲಿ ನನ್ನ ಹೆಸರು ಕೂಡ ಇತ್ತು. ಆದರೆ, ಬಸವರಾಜ ಹೊರಟ್ಟಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಅವಕಾಶ ತಪ್ಪಿತು. ಈ ಬಾರಿ ಪಶ್ಚಿಮ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಪಕ್ಷ ಈ ಬಾರಿಯೂ ಎಸ್.ವಿ.ಸಂಕನೂರ ಅವರಿಗೆ ಟಿಕೆಟ್ ನೀಡಿದ್ದರಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದೇನೆ’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಶ್ಚಿಮ ಪದವೀಧರರ ಕ್ಷೇತ್ರದ ಆಕಾಂಕ್ಷಿಯಾಗಿ ಕಳೆದ ನಾಲ್ಕು ವರ್ಷಗಳಿಂದಲೇ ಕೆಲಸ ಆರಂಭಿಸಿದ್ದೆ. ನಾಲ್ಕು ಜಿಲ್ಲೆಗಳಿಂದ ಈವರೆಗೆ 25 ಸಾವಿರಕ್ಕೂ ಅಧಿಕ ಮಂದಿ ಪದವೀಧರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸಿದ್ದೇನೆ. ಎಲ್ಲರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಗೆಲುವು ಸಾಧಿಸುವ ವಿಶ್ವಾಸ ಇದೆ’ ಎಂದು ಹೇಳಿದರು.

‘ಚುನಾವಣೆ ಸ್ಪರ್ಧೆಗೂ ಮುನ್ನ ನಾಲ್ಕು ಜಿಲ್ಲೆಗಳನ್ನು ಅಡ್ಡಾಡಿ ಅಲ್ಲಿರುವ ಪದವೀಧರರ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿದ್ದೇನೆ. ಸ್ಥಳೀಯವಾಗಿ ಉದ್ಯೋಗ ಸಿಗದ ಕಾರಣ ಯುವಕರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಪದವೀಧರರಿಗೆ ಕೌಶಲ ಕಲಿಸಲು ಯೋಜನೆ ರೂಪಿಸಿ, ಸ್ಥಳೀಯವಾಗಿಯೇ ಉದ್ಯೋಗ ಒದಗಿಸುವ ಭರವಸೆಯೊಂದಿಗೆ ಚುನಾವಣೆ ಎದುರಿಸುತ್ತಿದ್ದೇನೆ. ಇದು ನನ್ನ ಚುನಾವಣಾ ಪ್ರಣಾಳಿಕೆಯ ಪ್ರಮುಖ ಅಂಶವಾಗಿದೆ’ ಎಂದರು .

ವಿ.ಪಿ.ಗವಾಯಿ, ಈರಣ್ಣ ಮಡಿವಾಳರ, ಪಿ.ಆರ್.ಇನಾಂದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-23-215730807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.