ಗಂಗಾವತಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಪೈಕಿ ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಎನ್ಡಿಎ ಗೆಲುವು ಸಾಧಿಸಿದ್ದು ಸೋಮವಾರ ಬಿಜೆಪಿ ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ, ಅಡಳಿತ, ಜನಹಿತ ಕಾಪಾಡುವಿಕೆಯಂತ ಉತ್ತಮ ಕೆಲಸದಿಂದ ಪಂಚಾರಾಜ್ಯಗಳಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದಲ್ಲಿ ಎನ್ಡಿಎಗೆ ಮೂರು ರಾಜ್ಯದಲ್ಲಿ ಬಹುಮತ ಸಿಕ್ಕಿದೆ. ಮೋದಿಯವರ ಉತ್ತಮ ಆಡಳಿತಕ್ಕೆ ಸಿಕ್ಕ ಜಯವಾಗಿದೆ’ ಎಂದರು.

ಕಾಡಾ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ ಮಾತನಾಡಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಹೀರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಅಗೋಲಿ, ವಿರೇಶ ಬಲಕುಂದಿ, ಕಾಶಿನಾಥ ಚಿತ್ರಗಾರ, ವೀರೇಶ ಸುಳೆಕಲ್, ಮೌಲಸಾಬ, ಸಂಗಮೇಶ ಅಯೋಧ್ಯಾ, ದೀಪಕ್ ಭಾಂಟಿಯಾ, ಮಹಾಲಿಂಗಪ್ಪ ಬನ್ನಿಕೊಪ್ಪ ಸೇರಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಪಚುನಾವಣೆ, ಕೇರಳ ಗೆಲುವಿಗೆ ‘ಕೈ’ ಸಂಭ್ರಮಾಚರಣೆ

ಕೊಪ್ಪಳ: ಇಲ್ಲಿನ ಅಶೋಕ ವೃತ್ತದಲ್ಲಿ ಕರ್ನಾಟಕದ ಉಪಚುನಾವಣೆ ದಾವಣಗೆರೆ ಮತ್ತು ಬಾಗಲಕೋಟೆ ಹಾಗೂ ಕೇರಳದಲ್ಲಿ ಜಯಶಾಲಿಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ. ಇವು ಸಾಮಾನ್ಯ ಜನರ ಬದುಕಿಗೆ ಆಸರೆಯಾಗಿದ್ದು, ಕಾಂಗ್ರೆಸ್ ಉತ್ತಮ ಆಡಳಿತವನ್ನು ನೋಡಿ ಜನರು ಬಹುಮತದಿಂದ ಗೆಲ್ಲಿಸಿದ್ದಾರೆ. ಈ ಗೆಲುವು ಮೂರು ವರ್ಷದ ಆಡಳಿತಕ್ಕೆ ಹಿಡಿದ ಕನ್ನಡಿ. ಕೇರಳ ಮತ್ತೆ ಕೈ ವಶವಾಗಿದ್ದು, ವಿದ್ಯಾವಂತರು ಕಾಂಗ್ರೆಸ್ ಸಾಧನೆ ಗಮನಿಸಿ ಬೆಂಬಲಿಸಿದ್ದಾರೆ’ ಎಂದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಅಕ್ಬರ್ ಪಾಶಾ ಪಲ್ಟನ್, ಸುರೇಶ ದಾಸರಡ್ಡಿ, ಮಾನವಿ ಪಾಶಾ, ಚಿಕನ್ ಪೀರಾ, ಶ್ರೀನಿವಾಸ ಪಂಡಿತ, ಮೌನೇಶ ವಡ್ಡಟ್ಟಿ, ಮಲ್ಲಿಕಾರ್ಜುನ ಪೂಜಾರ, ಯಶೋಧ ಮರಡಿ, ಪದ್ಮಾ ಕಂಬಳಿ, ಗಂಗಮ್ಮ, ಬಸಯ್ಯಸ್ವಾಮಿ, ನಾಸೀರಹುಸೇನ, ಅಶೋಕ ಗೋರಂಟ್ಲಿ, ಆಸೀಫ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-35-1161672898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.