ಗಂಗಾವತಿ: ‘ಕಾಂಗ್ರೆಸ್ ಅಹಿಂದ ಪರ ಎಂದು ಜನರನ್ನು ಯಾಮಾರಿಸಿ ಅಧಿಕಾರಕ್ಕೆ ಬಂದಿದೆ. ಈವರೆಗೆ ಅಹಿಂದ ವರ್ಗಕ್ಕೆ ಏನೂ ಮಾಡಿಲ್ಲ. ಬರಿ ಅನ್ಯಾಯ ಮಾಡುತ್ತಲೇ ಬರುತ್ತಿದೆ. ಹಾಗಾಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಹಿಂದ ವರ್ಗದವರೇ ಸೋಲಿನ ಬುತ್ತಿ ಉಣಿಸಿ ಕಳುಹಿಸುತ್ತಾರೆ’ ಎಂದು ಶಾಸಕ ಜಿ.ಜನಾರ್ದನರೆಡ್ಡಿ ಹೇಳಿದರು.

ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು 3 ವರ್ಷಗಳಾಗುತ್ತಿವೆ. ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ಕಳೆದುಕೊಂಡು ಬಿಜೆಪಿ ಕಡೆ ವಾಲುತ್ತಿದ್ದಾರೆ’ ಎಂದರು.

‘ಒಂದು ವರದಿ ಪ್ರಕಾರ ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರ್ಧರಿತವಾಗಿದೆ. ದಾವಣಗೆರೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ಈಗಲೂ ಅಹಿಂದ ವರ್ಗದವರನ್ನು ಕಡೆಗಣಿಸಿದೆ. ಎಸ್.ಸಿ, ಎಸ್.ಟಿಯವರ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿ ಮೋಸ ಎಸಗಿದೆ’ ಎಂದು ದೂರಿದರು.

‘ಇರಾನ್, ಇಸ್ರೇಲ್ ಯುದ್ಧ ನಡೆಯುತ್ತಿರುವ ಕಾರಣ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಯುದ್ಧ ಭೀತಿ ಉಂಟಾಗಿದ್ದು, ಭಾರತ ಮಾತ್ರ ನಿರಾಳವಿದೆ. ಇದಕ್ಕೆ ಮೂಲ ಕಾರಣ ಪ್ರಧಾನಿ ಮೋದಿ. ಇರಾನ್ ರಾಷ್ಟ್ರ ಹೊರ್ಮುಜ್ ಜಲಸಂಧಿ ಬಂದ್ ಮಾಡಿದ್ದು, ಭಾರತದ ಧ್ವಜ ಕಂಡ ತಕ್ಷಣವೇ ಭಾರತದ ಹಡಗುಗಳನ್ನು ಬಿಡುತ್ತಿದೆ’ ಎಂದರು.

‘ದೇಶದಲ್ಲಿ ಪೆಟ್ರೋಲ್, ಡೀಸೆಲ್ಗಳ ಮೇಲೆ ಅಬಕಾರಿ ಸುಂಕ ಕಡಿಮೆ ಮಾಡಿರೋದು ಸಹ ದೊಡ್ಡ ವಿಚಾರವಾಗಿದೆ. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಕುತಂತ್ರದಿಂದ ಸುಳ್ಳು ಪ್ರಚಾರ ಮಾಡುತ್ತಿದೆ. ದೇಶ ರಕ್ಷಣೆ ಮೋದಿ ಕೆಲಸ ಎನ್ನುವುದು ದೇಶದ ಜನರಿಗೆ ತಿಳಿದಿದೆ’ ಎಂದು ಹೇಳಿದರು.

‘ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಆನೆಗೊಂದಿ ಭಾಗವನ್ನು ಸೇರ್ಪಡೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಆನೆಗೊಂದಿ ಭಾಗದ 15 ಹಳ್ಳಿಗಳು ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುತ್ತಿರುವ ಕಾರಣ ಜನರಿಗೆ ತೊಂದರೆಯಾಗಿದೆ. ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಕೈಬಿಟ್ಟು ಪ್ರತ್ಯೇಕ ಕಿಷ್ಕಿಂಧಾ ಪ್ರಾಧಿಕಾರ ರಚಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-35-1071742832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.