ಕುರ್ಸಿಯಂಗ್ (ಪಶ್ಚಿಮ ಬಂಗಾಳ) (ಪಿಟಿಐ): ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಹಿಡಿದ ಆರು ತಿಂಗಳ ಒಳಗಾಗಿ ಗೋರ್ಖಾಗಳ ಸಮಸ್ಯೆಯನ್ನು ಬಗೆಹರಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಬಿಜೆಪಿ ಹೊರತುಪಡಿಸಿ ಯಾವುದೇ ಪಕ್ಷ ಕೂಡ ಗೋರ್ಖಾಗಳು ಒಪ್ಪುವಂತಹ ಪರಿಹಾರವನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಡಾರ್ಜಿಲಿಂಗ್ ಜಿಲ್ಲೆಯ ಕುರ್ಸಿಯಂಗ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಗೋರ್ಖಾಗಳ ಕಳವಳ ಹಾಗೂ ಆಕಾಂಕ್ಷೆಗಳನ್ನು ಬಿಜೆಪಿಯು ಸ್ಪಷ್ಟವಾಗಿ ಅರಿತುಕೊಂಡಿದೆ. ಅವರ ಬೇಡಿಕೆಗಳನ್ನು ಈಡೇರಿಸಲು ಪಕ್ಷವೂ ಬದ್ಧವಾಗಿದೆ’ ಎಂದು ಹೇಳಿದ್ದಾರೆ.

‘ಬಂಗಾಳದಲ್ಲಿ ಬಿಜೆಪಿಯು ಅಧಿಕಾರ ಹಿಡಿದ ಆರು ತಿಂಗಳಲ್ಲಿ ಪ್ರತಿಯೊಬ್ಬ ಗೋರ್ಖಾ ಸಮುದಾಯದ ಪ್ರತಿಯೊಬ್ಬರ ಮುಖದಲ್ಲಿ ನಗು ಅರಳಲಿದೆ. ಗೋರ್ಖಾಗಳ ಸಮಸ್ಯೆಗೆ ನಾವು ಪರಿಹಾರ ಕಂಡುಹಿಡಿಯಲಿದ್ದು, ಶಾಂತಿಯಿಂದ ಬದುಕುವಂತೆ ಅವಕಾಶ ಮಾಡಿಕೊಡಲಿದ್ದೇವೆ’ ಎಂದು ಹೇಳಿದ್ದಾರೆ.

ಪ್ರತಿನಿಧಿ ಕಳುಹಿಸದ ಟಿಎಂಸಿ: ‘ಸಮಸ್ಯೆ ಬಗೆಹರಿಸುವ ಕುರಿತು ಪ್ರತಿ ಸಲವೂ ನಾನು ಸಭೆ ನಡೆಸಿದ ವೇಳೆ ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ಪ್ರತಿನಿಧಿಗಳನ್ನು ಕಳುಹಿಸುತ್ತಿರಲಿಲ್ಲ. ಅದಕ್ಕಾಗಿಯೇ ಒಬ್ಬ ಸಂವಾದಕನನ್ನು ನೇಮಿಸಬೇಕಾಯಿತು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-1148427758

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.