ಹಗರಿಬೊಮ್ಮನಹಳ್ಳಿ: ಇಲ್ಲಿನ ಪುರಸಭೆ ಅಧ್ಯಕ್ಷರ ಚುನಾವಣೆ ಏ.30ರಂದು ಪುರಸಭೆ ಕಚೇರಿಯಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆದ ಹೊಸಪೇಟೆ ಉಪ ವಿಭಾಗಧಿಕಾರಿ ಪಿ.ವಿವೇಕಾನಂದ ತಿಳಿಸಿದ್ದಾರೆ.

ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ– ಎ ಜಾತಿಗೆ ಮೀಸಲಿದೆ. ಹಿಂದಿನ ಅಧ್ಯಕ್ಷ ಎಂ.ಮರಿರಾಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದೆ.

ಪುರಸಭೆಯಲ್ಲಿ ಒಟ್ಟು 23 ಸದಸ್ಯರಿದ್ದು, ಕಾಂಗ್ರೆಸ್– 12, ಬಿಜೆಪಿ– 11 ಸದಸ್ಯರ ಬಲಾಬಲ ಇದೆ. ಕಳೆದ ಬಾರಿ ಬಿಜೆಪಿಯ ಇಬ್ಬರು ಸದಸ್ಯರು ಕಾಂಗ್ರೆಸ್ಗೆ ಬೆಂಬಲ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ಕಾಂಗ್ರೆಸ್ಗೆ ಸುಲಭವಾಗಿ ಒಲಿದಿತ್ತು. ಮೊದಲಾರ್ಧದ ಎರಡೂವರೆ ವರ್ಷಗಳಿಗೆ ನಿಗದಿಯಾದ ಮೀಸಲಾತಿಗೆ ಉಳಿದ 12 ತಿಂಗಳ ಅವಧಿಗೆ ಅಧ್ಯಕ್ಷರು ಯಾರಾಗಬಹುದು ಎನ್ನುವ ಕೂತೂಹಲ ಮೂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಪಕ್ಷ ತೊರೆದಿರುವ ಸದಸ್ಯರನ್ನು ಮತ್ತೆ ಪಕ್ಷಕ್ಕೆ ಕರೆತರಲು ಬಿಜೆಪಿ ಮುಖಂಡರು ಹರಸಾಹಸ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಸುಲಭವಾಗಿ ಗದ್ದುಗೆ ಏರಲು ಭಾರಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-25-92788416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.