ಹರಪನಹಳ್ಳಿ: ‘ಉಪಚುನಾವಣೆ ಸಂದರ್ಭದಲ್ಲಿ ದಾವಣಗೆರೆಗೆ ಬಂದು ಪ್ರಚಾರ ಮಾಡದೇ ಹೋಗಿರುವ ಸಚಿವ ಜಮೀರ್ ಅಹ್ಮದ್ ಅವರು ತಾಯಿ (ಕಾಂಗ್ರೆಸ್)ಗೆ ದ್ರೋಹ ಮಾಡಿದ್ದಾರೆ. ಕೂಡಲೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು, ಜಮೀರ್ ಅಹ್ಮದ್ ಅವರ ತಲೆದಂಡ ಆಗಲೆಬೇಕು’ ಎಂದು ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಡಿ.ಬಸವರಾಜ್ ಒತ್ತಾಯಿಸಿದರು.

ತಾಲ್ಲೂಕಿನ ಕಂಚಿಕೇರೆ ಗ್ರಾಮದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕೆಲವು ಮುಖಂಡರು ನಾವೇ ಅಲ್ಪಸಂಖ್ಯಾತ ಮುಸ್ಲಿಂ ಲೀಡರ್ ಎಂದು ಪೋಸು ಕೊಡುತ್ತಾರೆ ಇದು ಸುಳ್ಳು. ಮುಸ್ಲಿಮರ ನಿಜವಾದ ನಾಯಕ ಸಿದ್ದರಾಮಯ್ಯ’ ಎಂದರು.

‘ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಮುಸ್ಲಿಂ ಮುಖಂಡರು ಷಡ್ಯಂತ್ರ ಮಾಡಿದ್ದಾರೆ, ಇದರ ಬಗ್ಗೆ ಸಲೀಂ ಅಹ್ಮದ್, ರಿಜ್ವಾನ್ ಹರ್ಷದ್ ಅವರು ನೀಡಿರುವ ಹೇಳಿಕೆ ಸತ್ಯವಾಗಿದೆ. ಯಾರೇ ಏನೇ ಷಡ್ಯಂತ್ರ ಮಾಡಿದರೂ ಸಹ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರು 25 ಸಾವಿರ ಮತಗಳ ಅಂತರದಿಂದ ಗೆದ್ದೆ ಗೆಲ್ಲುತ್ತಾರೆ’ ಎಂದು ಪ್ರತಿಪಾದಿಸಿದರು.

‘ಜಮೀರ್ ಅಹ್ಮದ್ ಅವರು ಮುಸ್ಲಿಂ ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದ್ದಾರೆ. ದಾವಣಗೆರೆ ಬಂದು ಪ್ರಚಾರ ಮಾಡದೇ ಹೋಗಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು ತಾಯಿ ದ್ರೋಹ ಮಾಡಿದ್ದಾರೆ, ಹಾಗಾಗಿ ಅವರ ತಲೆದಂಡವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ವಿಶ್ವಾಸವಿದೆ. ಮುಸ್ಲಿಮರು ಕಾಂಗ್ರೆಸ್ ಪಕ್ಷದ ಜೊತೆಗೆ ಇದ್ದೆ ಇರುತ್ತಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-25-1219656701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.