ಹಿರಿಯೂರು: ‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಜೊತೆಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ರಾಜ್ಯ ಎಸ್ಐಆರ್ ಸಂಚಾಲಕ ಜಗದೀಶ್ ಹಿರೇಮನಿ ಸೂಚಿಸಿದರು.

ನಗರದಲ್ಲಿ ಶುಕ್ರವಾರ ತಾಲ್ಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬಿಎಲ್ಎ–2 ಕಾರ್ಯಾಗಾರ, ವಿಬಿ ಜಿ ರಾಮ್ ಜಿ ಯೋಜನೆ ಹಾಗೂ ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪಕ್ಷದ ಕಾರ್ಯಕರ್ತರು ಬಹುದೊಡ್ಡ ಆಸ್ತಿ. ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದು, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವುದು ಹಾಗೂ ಪಕ್ಷದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು’ ಎಂದು ತಿಳಿಸಿದರು.

‘ಪಕ್ಷ ಸಂಘಟನೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಸಕ್ರಿಯವಾಗಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು. ಪಕ್ಷದ ತತ್ವ– ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಶ್ರಮಿಸಬೇಕು’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅಭಿನಂದನ್ ಮನವಿ ಮಾಡಿದರು.

ಬಿಜೆಪಿ ಕೋರ್ ಕಮಿಟಿ ಸದಸ್ಯ ಎನ್.ಆರ್. ಲಕ್ಷ್ಮೀಕಾಂತ್ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ದಾವಣಗೆರೆ ವಿಭಾಗದ ಎಸ್ಐಆರ್ ಸಹ ಸಂಯೋಜಕ ಲಿಂಗನಗೌಡ, ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ವಿ.ವಿಶ್ವನಾಥ್, ಜೆ.ಬಿ. ರಾಜಣ್ಣ, ದ್ಯಾಮೇಗೌಡ, ನಿತಿನ್ ಗೌಡ, ಯೋಗೇಶ್, ಕೆ.ಟಿ. ಹನುಮಂತ, ಸಿ. ಮುರಳೀಧರ, ಮಂಜುನಾಥ್, ರಾಜೇಶ್ವರಿ, ಮಂಜುಳಾ, ಸಿಂಧುತನಯ, ಎಂ.ವಿ.ಹರ್ಷ, ಎಂ.ಎಸ್. ರಾಘವೇಂದ್ರ, ಸೋಮಣ್ಣ, ಕೆ. ನಾಗರಾಜ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-44-1979794499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.