ಹಿರಿಯೂರು: ‘ಹಿರಿಯೂರು ಕ್ಷೇತ್ರದ ಉಪ ಚುನಾವಣೆಗೆ ನಾನು ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್ ತಿಳಿಸಿದರು.

ತಾಲ್ಲೂಕಿನ ಬುರುಜನರೊಪ್ಪ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆ ಹಾಗೂ ಉಪಚುನಾವಣೆ ಕುರಿತು ಚರ್ಚಿಸಲು ಭಾನುವಾರ ಕರೆದಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

‘ನಾನು 2008ರಿಂದ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದು, ಕಾರ್ಯಕರ್ತರು ಹಾಗೂ ಸ್ಥಳೀಯರ ಕಷ್ಟ–ಸುಖಗಳಲ್ಲಿ ಭಾಗಿಯಾಗಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಚುನಾವಣೆ ಎದುರಿಸಲು ಸಿದ್ಧನಿದ್ದೇನೆ’ ಎಂದರು.

‘ಲಕ್ಷ್ಮೀಕಾಂತ್ ಅವರಿಗೆ ಪಕ್ಷ ಟಿಕೆಟ್ ನೀಡಿದಲ್ಲಿ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ, ಹೈಕಮಾಂಡ್ ಅವಕಾಶ ನೀಡಿದಲ್ಲಿ ನಾನೂ ಉಪಚುನಾವಣೆ ಎದುರಿಸಲು ಸಿದ್ಧ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅಭಿನಂದನ್ ಹೇಳಿದರು.

‘ಈ ಬಾರಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಬೇಕು. ಬಿಜೆಪಿ ಅಥವಾ ಜೆಡಿಎಸ್ನಿಂದ ಯಾರಿಗೇ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಗೆಲುವಿಗಾಗಿ ಶ್ರಮಿಸೋಣ’ ಎಂದು ಜೆಡಿಎಸ್ ಮುಖಂಡ ರವೀಂದ್ರಪ್ಪ ತಿಳಿಸಿದರು.

ಸಭೆಯಲ್ಲಿದ್ದ ಬಹುತೇಕ ಮುಖಂಡರು, ಕಾರ್ಯಕರ್ತರು ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡುವಂತೆ ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಒತ್ತಾಯಿಸೋಣ ಎಂದು ಸಲಹೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-1385346301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.