ಹೊನ್ನಾಳಿ: ತಾಲ್ಲೂಕಿನ ಗೊಲ್ಲರಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕಕ್ಕೆ ಮೇ 24ರಂದು ಚುನಾವಣೆ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಚೀಲೂರು ರುದ್ರಪ್ಪ ಹೇಳಿದರು.

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಚುನಾವಣೆ ನಡೆಯದೇ ಇರುವ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೊನ್ನಾಳಿ ತಾಲ್ಲೂಕು ಘಟಕದಲ್ಲಿ ಅಧ್ಯಕ್ಷ ಸ್ಥಾನ (1), ಸಾಮಾನ್ಯ (13) ಹಾಗೂ ಮಹಿಳಾ ಮೀಸಲಾತಿ (7) ಸೇರಿ ಒಟ್ಟು 21 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 2026ರ ಏ. 29ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 6ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ಎಂದರು.

ಮೇ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 10ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆದುಕೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಮೇ 24ಕ್ಕೆ ಮತದಾನ: ಮೇ 24ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಒಟ್ಟು 359 ಮತದಾರರು ಇದ್ದು, ಮೇ 24ರಂದೇ ಮತ ಎಣಿಕೆ ನಡೆಯಲಿದೆ. ಫಲಿತಾಂಶವನ್ನು ಕೂಡಾ ಅಂದೇ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-43-1523119968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.