ಹುಬ್ಬಳ್ಳಿ: ‘ರಾಜ್ಯದಲ್ಲಿ ಶೀಘ್ರದಲ್ಲಿಯೇ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಆರಂಭವಾಗಲಿದ್ದು, ವಾರ್ಡ್ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖರು ಸಕ್ರಿಯವಾಗಿ ಭಾಗವಹಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶಿಕ್ಷಣ ವರ್ಗಗಳ ಶಿಬಿರ ಮುಕ್ತಾಯಗೊಂಡಿದ್ದು, ವಾರ್ಡ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಪಕ್ಷದ ಸಂಘಟನಾತ್ಮಕ ಕಾರ್ಯ ಮಾಡಬೇಕು’ ಎಂದು ಸೂಚಿಸಿದರು.

‘ದೇಶದಲ್ಲಿ ಈಗಾಗಲೇ ಎಸ್ಐಆರ್ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಆರಂಭವಾಗಲಿದೆ. ಇದು ಮಹತ್ವದ ಕಾರ್ಯವಾಗಿದ್ದು, ಪಕ್ಷದ ಬಿಎಲ್ಎ–2 ಪ್ರಮುಖರು ತಮ್ಮ ತಮ್ಮ ವಾರ್ಡ್ಗಳ ಬೂತ್ಗಳಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಪ್ರತಿಯೊಬ್ಬರೂ ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಿಳಿಸಬೇಕು’ ಎಂದು ಹೇಳಿದರು.

ಪಾಲಿಕೆಯ ಉಪ ಮೇಯರ್ ಸಂತೋಷ್ ಚವ್ಹಾಣ್, ಬಿಎಲ್ಎ ಪ್ರಶಾಂತ ಜಾದವ್, ಪ್ರಮುಖರಾದ ರಾಮನಗೌಡ ಶೆಟ್ಟನಗೌಡರ್, ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಉಮೇಶ್ ಗೌಡ ಕೌಜಿಗೇರಿ, ನರಗುಂದ ಬೀರಪ್ಪ ಖಂಡೇಕರ್, ಉಮಾ ಮುಕುಂದ, ರೂಪಾ ಶೆಟ್ಟಿ, ಸಿದ್ದು ಮೊಗಲಿ ಶೆಟ್ಟರ್, ರವಿನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-1748074459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.