ಹುಬ್ಬಳ್ಳಿ: ‘ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಮೋಹನ್ ಲಿಂಬಿಕಾಯಿ ಅವರನ್ನು ಗೆಲ್ಲಿಸಿ. ಕ್ಷೇತ್ರದಲ್ಲಿ ಪಕ್ಷವು ಪುನಃ ಅಧಿಪತ್ಯ ಸಾಧಿಸುವ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಿ’ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ಇಲ್ಲಿ ಬುಧವಾರ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಕ್ಷೇತ್ರವು ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಆಗಿತ್ತು. ಈ ಹಿಂದೆ ಬಿಜೆಪಿಯಲ್ಲಿದ್ದ ಮೋಹನ್ ಲಿಂಬಿಕಾಯಿ ಅವರು ನಮ್ಮ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿದ್ದರು. ಈಗ ಅವರು ನಮ್ಮ ಪಕ್ಷದಲ್ಲಿದ್ದು, ಬಿಜೆಪಿಯನ್ನು ಸೋಲಿಸುತ್ತೇವೆ’ ಎಂದರು.

‘ವಿಧಾನ ಪರಿಷತ್ ಸದಸ್ಯರಾಗಿ ಈ ಹಿಂದೆ ಉತ್ತಮ ಕೆಲಸ ಮಾಡಿರುವ ಲಿಂಬಿಕಾಯಿ ಅವರಿಗೆ ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿದೆ. ಪಕ್ಷದ ನಿರ್ಧಾರದಂತೆ ಅವರನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು’ ಎಂದರು.

‘ಈ ಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರಿದ್ದಾರೆ. ತಮ್ಮ ಮತದಿಂದ ದೇಶ, ಸಮಾಜದ ಅಭಿವೃದ್ಧಿಗೆ ಯಾವ ರೀತಿ ಅನುಕೂಲವಾಗುತ್ತದೆ, ಯಾರು ಯಾವ ರೀತಿ ಕೆಲಸ ಮಾಡಿದ್ದಾರೆ ಎಂಬುದನ್ನು ಯೋಚಿಸಿ ಮತದಾನ ಮಾಡಬೇಕು’ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಮಾತನಾಡಿ, ‘ಪಶ್ಚಿಮ ಪದವೀಧರರ ಕ್ಷೇತ್ರವು ಧಾರವಾಡ, ಉತ್ತರ ಕನ್ನಡ, ಹಾವೇರಿ, ಗದಗ ಜಿಲ್ಲೆಗಳನ್ನು ಒಳಗೊಂಡಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ನ 17 ಶಾಸಕರು, ಬಿಜೆಪಿಯ ಆರು ಶಾಸಕರು ಇದ್ದಾರೆ. ಹೀಗಾಗಿ ಗೆಲುವು ಕಷ್ಟವಲ್ಲ. ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ಇದೆ’ ಎಂದರು.

‘ಈ ಕ್ಷೇತ್ರಕ್ಕೆ ಆರು ವರ್ಷಕ್ಕೊಮ್ಮೆ ಚುನಾವಣೆ ನಡೆಯುತ್ತದೆ. 2020ರಲ್ಲಿ ಕೋವಿಡ್ ಕಾರಣ ನಾಲ್ಕು ತಿಂಗಳು ಚುನಾವಣೆ ಮುಂದೂಡಲಾಗಿತ್ತು. ಅದರಂತೆ ಈಗ ಜೂನ್ನಲ್ಲಿ ಚುನಾವಣೆ ನಡೆದರೆ, ಶೀಘ್ರವೇ ಅಧಿಸೂಚನೆ ಬರಬಹುದು’ ಎಂದರು.

ಹುಬ್ಬಳ್ಳಿ–ಧಾರವಾಡ ಕಾಂಗ್ರೆಸ್ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಾಜಿ ಶಾಸಕ ಎಂ.ಎಸ್.ಅಕ್ಕಿ, ಹು–ಧಾ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಇಮ್ರಾನ್ ಯಲಿಗಾರ, ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್.ಪಾಟೀಲ, ಮುಖಂಡ ಸದಾನಂದ ಡಂಗನವರ, ಸುನೀಲ್ ಮರಾಠೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-24-1146637312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.