ಕಲಬುರಗಿ: ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಹಾಗೂ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿ ಎದುರು ಸೋಮವಾರ ವಿಜಯೋತ್ಸವ ಆಚರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆಗಳನ್ನು ಕೂಗಿದರು.

ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಬಾಗಲಕೋಟೆಯಲ್ಲಿ ಪಕ್ಷದ ಹಿರಿಯ ನಾಯಕರಾಗಿದ್ದ ಎಚ್.ವೈ.ಮೇಟಿ ಹಾಗೂ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕ್ರಮವಾಗಿ ಉಮೇಶ ಮೇಟಿ ಹಾಗೂ ಸಮರ್ಥ ಶಾಮನೂರು ಅವರು ಗೆಲುವು ದಾಖಲಿಸಿದ್ದಾರೆ. ಇದು ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ನೀಡಿದ ಉಡುಗೊರೆಯಾಗಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಮಹಿಳೆಯರು, ಯುವಕರು, ರೈತರು, ಕಾರ್ಮಿಕರನ್ನು ಒಳಗೊಂಡಂತೆ ಎಲ್ಲರಿಗೂ ನೆರವಾಗುವ ಉದ್ದೇಶದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದನ್ನು ಮತದಾರರು ಗಮನದಲ್ಲಿರಿಸಿಕೊಂಡು ಮತ ಚಲಾಯಿಸಿದ್ದಾರೆ. ಬಿಜೆಪಿ ಚುನಾವಣೆ ವೇಳೆ ಕೋಮು ಧ್ರುವೀಕರಣಕ್ಕೆ ಪ್ರಯತ್ನ ಮಾಡಿತಾದರೂ ಮತದಾರರು ಅಭಿವೃದ್ಧಿಪರ ಸರ್ಕಾರವನ್ನು ಬೆಂಬಲಿಸಿದ್ದಾರೆ’ ಎಂದರು.

‘ಪಕ್ಷಕ್ಕಾಗಿ ದುಡಿದ ಎಚ್.ವೈ. ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೇ ಟಿಕೆಟ್ ನೀಡಲು ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನಿಸಿದರು. ಪಕ್ಷದ ಕಾರ್ಯಕರ್ತರೂ ಪಕ್ಷದ ನಾಯಕರ ಆಶಯವನ್ನು ಬೆಂಬಲಿಸಿ ಉತ್ತಮವಾಗಿ ಕೆಲಸ ಮಾಡಿದ್ದರಿಂದ ಗೆಲುವು ನಮ್ಮದಾಗಿದೆ’ ಎಂದು ಹೇಳಿದರು.

‘ರಾಹುಲ್ ಗಾಂಧಿಯವರ ನಾಯಕತ್ವವನ್ನು ಮೆಚ್ಚಿ ಕೇರಳದಲ್ಲಿ ಮತದಾರರು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಆ ಮೂಲಕ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಂತಾಗಿದೆ’ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಮಾತನಾಡಿ, ‘ಪಕ್ಷವು ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಶ್ರಮ ಅಡಗಿದೆ’ ಎಂದು ತಿಳಿಸಿದರು.

ಪಕ್ಷದ ಮುಖಂಡರಾದ ಲಿಂಗರಾಜ ತಾರಫೈಲ್, ರಾಜೀವ ಜಾನೆ, ಲಿಂಗರಾಜ ಕಣ್ಣಿ, ಶಾಮ ನಾಟೀಕಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-34-1778829345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.