ಕಲಬುರಗಿ: ‘ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣಬಲದಿಂದ ಪ್ರಜಾಪ್ರಭುತ್ವಕ್ಕೆ ಅಪಾಯ ಕಾದಿದೆ’ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ಕುಮನೂರ ಅಭಿಪ್ರಾಯಪಟ್ಟರು.

ನಗರದ ಶರಣಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಆಯೋಜಿಸಿದ್ದ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ-ಪ್ರಜಾಪ್ರಭುತ್ವ ಉಳಿಸಿ’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

‘ಚುನಾವಣೆಗಳನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಸಂವಿಧಾನದ 324ನೇ ಅನುಚ್ಛೇದದ ಪ್ರಕಾರ ಚುನಾವಣಾ ಆಯೋಗ ಸ್ವತಂತ್ರವಾದ ಅಧಿಕಾರ ಹೊಂದಿದೆ. ಟಿ.ಎನ್.ಶೇಷನ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿದ್ದಾಗ ದೇಶದಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ದೊಡ್ಡ ದೊಡ್ಡ ರಾಜಕಾರಣಿಗಳು ಮುಖ್ಯ ಚುನಾವಣಾ ಆಯುಕ್ತರಿಗೆ ಹಾಗೂ ಚುನಾವಣಾ ಅಧಿಕಾರಿಗಳಿಗೆ ಹೆದರುತ್ತಿದ್ದರು. ಟಿ.ಎನ್.ಶೇಷನ್ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಮೂಲಕ ಚುನಾವಣಾ ಆಯೋಗದ ಘನತೆ ಹೆಚ್ಚಿಸಿದ್ದರು’ ಎಂದರು.

‘ದೇಶಕ್ಕೆ ಟಿ.ಎನ್.ಶೇಷನ್ ಅವರಂತಹ ಮುಖ್ಯ ಚುನಾವಣಾ ಆಯುಕ್ತರ ಅಗತ್ಯ ಇದೆ. ಪ್ರತಿಯೊಬ್ಬರೂ ಚುನಾವಣೆಗಳಲ್ಲಿ ಹಣ ಹಂಚಲು ಬಂದವರನ್ನು ತಿರಸ್ಕರಿಸುವ ಮೂಲಕ ಮತದ ಮೌಲ್ಯ ಎತ್ತಿ ಹಿಡಿಯಬೇಕಾಗಿದೆ’ ಎಂದು ಹೇಳಿದರು.

‘ಇತ್ತೀಚೆಗೆ ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣಬಲದಿಂದ ಸಮಾಜ ಸೇವಕರು, ನಿಷ್ಠಾವಂತ ರಾಜಕೀಯ ಕಾರ್ಯಕರ್ತರು, ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಗಳಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲಿಕ್ಕೆ ಅವಕಾಶವೇ ಇಲ್ಲದಂತಾಗುತ್ತಿದೆ. ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣಬಲದಿಂದ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಂಶುಪಾಲ ಲಕ್ಷ್ಮಿಕಾಂತ ಖಣದಾಳ ಮಾತನಾಡಿ, ‘ಎಲ್ಲಾ ಚುನಾವಣೆಗಳಲ್ಲಿ ಹಣ ಹಂಚುವುದು ಅವ್ಯಾಹತವಾಗಿ ನಡೆಯುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ತಮ್ಮ ತಮ್ಮ ಮನೆಗಳಲ್ಲಿ, ಓಣಿಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಆರ್.ಧುತ್ತರಗಿ ಮಾತನಾಡಿದರು.

ಅತ್ಯುತ್ತಮವಾಗಿ ವಿಚಾರ ಮಂಡಿಸಿದ ಪ್ರಶಿಕ್ಷಣಾರ್ಥಿಗಳಾದ ಕೆ.ಶ್ವೇತಾ, ಧರೇಶ, ಪ್ರಿಯದರ್ಶಿನಿ, ಸೈಯದ್ ಖಾನ್, ಭಾಗ್ಯಶ್ರೀ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಅಭಿನಯಾ ಸ್ವಾಗತಿಸಿದರು. ತನುಜಾ ಮಣ್ಣೂರ ನಿರೂಪಿಸಿದರು. ಮೇಘಾ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-34-1559614495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.