ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ ಸ್ವಾರಸ್ಯ: ಹಿರಿಯರ ಪಾರಮ್ಯ

Published 14 ಏಪ್ರಿಲ್ 2024, 19:58 IST
Last Updated 14 ಏಪ್ರಿಲ್ 2024, 19:58 IST
ಅಕ್ಷರ ಗಾತ್ರ

ಪ್ರತಿ ಚುನಾವಣೆಯಲ್ಲೂ ಅಭ್ಯರ್ಥಿಗಳ ವಯಸ್ಸಿನ ವಿಷಯ ದೊಡ್ಡ ಸದ್ದು ಮಾಡುತ್ತದೆ. ದಶಕಗಳ ಕಾಲದಿಂದ ರಾಜಕೀಯ ಅಧಿಕಾರಕ್ಕೆ ಅಂಟಿಕೊಂಡಿರುವವರನ್ನು ಬದಿಗೆ ಸರಿಸಿ ಯುವ ಮುಖಗಳಿಗೆ ಅವಕಾಶ ಕೊಡಬೇಕು ಎಂಬ ಚರ್ಚೆ ಕೆಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಹಿಂದಿನ ಹಲವು ಚುನಾವಣೆಗಳಲ್ಲಿ ಯುವ ನಾಯಕತ್ವದ ವಿಷಯವನ್ನು ಬಿಜೆಪಿ ಮುನ್ನೆಲೆಗೆ ತಂದಿತ್ತು. 70 ವರ್ಷ ವಯಸ್ಸಾದವರಿಗೆ ಟಿಕೆಟ್‌ ನಿರಾಕರಿಸುವ ಮತ್ತು 75 ವರ್ಷ ವಯಸ್ಸಾದ ನಾಯಕರನ್ನು ಸಕ್ರಿಯ ರಾಜಕಾರಣದಿಂದಲೇ ನಿವೃತ್ತಿಗೊಳಿಸುವ ಪ್ರಯತ್ನವನ್ನೂ ಬಿಜೆಪಿ ಮಾಡಿತ್ತು.

ಈ ಬಾರಿ ರಾಜ್ಯದಲ್ಲಿ ತನ್ನದೇ ಮಾದರಿಯನ್ನು ಬಿಜೆಪಿ ಮುರಿದಿದೆ. 60 ವರ್ಷಕ್ಕಿಂತ ಹೆಚ್ಚು ವಯಸ್ಸಾಗಿರುವ 11 ಮಂದಿಯನ್ನು ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿಸಿದೆ. ಸಾಮಾನ್ಯವಾಗಿ ಟಿಕಟ್‌ ಹಂಚಿಕೆಯಲ್ಲಿ ಹಿರಿಯರಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದ ಕಾಂಗ್ರೆಸ್‌ ಪಕ್ಷ ಈ ಬಾರಿ ತದ್ವಿರುದ್ಧ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್‌ ಅಭ್ಯರ್ಥಿಗಳಲ್ಲಿ ಆರು ಮಂದಿ ಮಾತ್ರ 60 ವರ್ಷಕ್ಕಿಂತ ಹೆಚ್ಚು ವಯಸ್ಸಿನವರು. ಬಿಜೆಪಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಈ ಚುನಾವಣೆಯ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಅತಿ ಹಿರಿಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT