ರಾಂಪುರ: ‘ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ರಾಜ್ಯದ ಜನರಿಗೆ ನಂಬಿಕೆ ಹಾಗೂ ವಿಶ್ವಾಸ ದ್ರೋಹ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಜನ ಬೇಸತ್ತಿದ್ದು, ಈ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಲಿದ್ದಾರೆ’ ಎಂದರು.

‘ನಮ್ಮ ಆಡಳಿತದ ಅವಧಿಯಲ್ಲಿ ಜಾರಿಗೊಳಿಸಿದ್ದ ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಪ್ರತಿವರ್ಷ ₹4 ಸಾವಿರ ಸಹಾಯಧನ ನೀಡುವುದು ಸೇರಿ ಹಲವು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ಕಾಂಗ್ರೆಸ್ ಪಕ್ಷ ಇನ್ನೊಮ್ಮೆ ಚುನಾವಣೆಗೆ ನಿಲ್ಲುವ ಧೈರ್ಯ ಮಾಡದ ರೀತಿಯಲ್ಲಿ ಪಾಠ ಕಲಿಸಬೇಕು. ಆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು 10 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಯುವಕರಿಗೆ ನೀಡಬೇಕಾದ ಸಹಾಯಧನ ಸೇರಿದಂತೆ ಹಲವಾರು ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಆರೋಪಿಸಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಜನರಿಗೆ ನಿಜವಾದ ಪ್ರಯೋಜನ ತಂದಿವೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ. ರಾಜ್ಯ ಸರ್ಕಾರದಿಂದ ನಿರುದ್ಯೋಗ ಸಮಸ್ಯೆಗೆ ಸಮರ್ಪಕ ಪರಿಹಾರ ದೊರಕಿಲ್ಲ’ ಎಂದು ಟೀಕಿಸಿದರು.

ಸಂಸದರಾದ ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಸಿ.ಪಾಟೀಲ, ರಮೇಶ ಕತ್ತಿ, ಎ.ಎಸ್.ಪಾಟೀಲ ನಡಹಳ್ಳಿ ಸೇರಿದಂತೆ ಹಲವು ನಾಯಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-19-1860963005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.