ಶಿರಸಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿರುವು ದಾಗಿ ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುಧೀಂದ್ರ ದೇಶಪಾಂಡೆ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘35 ವರ್ಷಗಳಿಂದ ಸಂಘ ಪರಿವಾರ ಹಾಗೂ ಬಿಜೆಪಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದೇನೆ. 5 ವರ್ಷಗಳಿಂದ ಈ ಕ್ಷೇತ್ರಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದರೂ, ಪಕ್ಷವು ಮತ್ತೆ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ಘೋಷಿಸಿದೆ. ಹೊಸಬರಿಗೆ ಹಾಗೂ ಸಂಘದ ಮೂಲದವರಿಗೆ ಅವಕಾಶ ನೀಡುವಂತೆ ನಾಯಕರನ್ನು ಕೋರಿದ್ದೆವು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ನಾನು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ ಮತ್ತು ಪಕ್ಷದ ವಿರುದ್ಧ ನಿಲ್ಲುತ್ತಿಲ್ಲ. ಸಂಕನೂರು ಅವರ ವಿರುದ್ಧ ಅಲೆ ಇರುವುದರಿಂದ ನನಗೆ ಲಾಭವಾಗುವ ವಿಶ್ವಾಸವಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-20-693865317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.