ವಿಷಯ: ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದಲಾವಣೆಯನ್ನು ತಂದು, ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಎಸ್ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ಮುಖಂಡರು ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಚುನಾವಣೆ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಎಸ್ಐಆರ್ ಸಂವಿಧಾನ ವಿರೋಧಿ, ಪ್ರಜಾತಂತ್ರಕ್ಕೆ ಮಾರಕ, ಪ್ರತಿಯೊಬ್ಬ ಪ್ರಜೆಯನ್ನು ಅಪರಾಧಿಯ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶಪೂರಿತ ಪ್ರಕ್ರಿಯೆಯಾಗಿದೆ. ದೇಶದಲ್ಲಿ ಮತದಾನದ ಹಕ್ಕಿಲ್ಲದ ಎರಡನೇ ದರ್ಜೆಯ ಪ್ರಜೆಗಳನ್ನು ಸೃಷ್ಟಿಸುವ ಪ್ರಕ್ರಿಯೆಯ ಆರಂಭವಾಗಿದೆ. ಕೇಂದ್ರದಲ್ಲಿ ಆಡಳಿತರೂಢ ಬಿಜೆಪಿಯ ರಾಜಕೀಯ ಷಡ್ಯಂತ್ರವೂ ಇದೆ. ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿ, ಆದಿವಾಸಿ, ದಮನಿತ ಸಮುದಾಯಗಳು ಹಾಗೂ ಅಲ್ಪಸಂಖ್ಯಾತರನ್ನು ಪ್ರಜಾತಾಂತ್ರಿಕ ಪ್ರಕ್ರಿಯೆಯಿಂದ ಹೊರದಬ್ಬುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಎಸ್ಐಆರ್ ನಡೆದ ರಾಜ್ಯಗಳಲ್ಲಿ ಇದುವರೆಗೆ 6.5 ಕೋಟಿ ಮತದಾರರನ್ನು ಮತಪಟ್ಟಿಯಿಂದ ತೆಗೆಯಲಾಗಿದೆ. ಪಶ್ಚಿಮ ಬಂಗಾಳದಲ್ಲಿ ದಾಖಲೆಗಳಿದ್ದರೂ 27 ಲಕ್ಷ ಜನರಿಗೆ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ ಎಂದರು.

ರಾಜ್ಯದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ನಡೆಸಬೇಕಾದರೆ ಮೂಲಭೂತ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಅತಂತ್ರ್ಯ ಅವೈಜ್ಞಾನಿಕ, ಅವಾಸ್ತವಿಕ, ಅಪಾರದರ್ಶಕ ಹಾಗೂ ದುರುದ್ದೇಶಪೂರಿತ ವಿಧಾನವಾಗಿದೆ. ಇದನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅಳವಡಿಸಬಾರದು. ಸ್ಪೆಲಿಂಗ್, ದಿನಾಂಕದಂತಹ ಕ್ಷುಲ್ಲಕ ವಿಚಾರಗಳನ್ನು ಇಟ್ಟುಕೊಂಡು ಮತದಾನದ ಹಕ್ಕಿನಿಂದ ಯಾರನ್ನೂ ಹೊರಗೆ ಇರಿಸಬಾರದು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿ ರಹಸ್ಯ ದಾಖಲೆಯಲ್ಲ. ಅದು, ದೇಶದ ಮತದಾರರ ಮುಕ್ತಪಟ್ಟಿ. ಕರಡು ಪಟ್ಟಿ ತಯಾರಾದ ನಂತರ ಯಾರ ಮತವನ್ನಾದರೂ ಸುಲಭವಾಗಿ ಹುಡುಕಬಹುದಾದ ರೀತಿಯಲ್ಲಿ ಪಾರದರ್ಶಕತೆ ಇರುವ ರೀತಿಯಲ್ಲಿ ಅದನ್ನು ‘ಕಂಪ್ಯೂಟರ್ ರೀಡೆಬಲ್ ಮಾದರಿಯಲ್ಲಿ ನೀಡಬೇಕು. ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಚುನಾವಣಾ ಆಯೋಗದ ಮ್ಯಾನ್ಯುಯಲ್ನಲ್ಲಿನ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಪ್ರದೇಶಗಳಲ್ಲಿ ಆ ಭಾಗದ ಮತದಾರರ ಕರಡು ಪಟ್ಟಿಯನ್ನು ಬಹಿರಂಗವಾಗಿ ಪ್ರಕಟಿಸಿ ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು. ಜೊತೆಗೆ ಮುಕ್ತವಾದ ರೀತಿಯಲ್ಲಿ ಎಲ್ಲರ ಸಮ್ಮುಖದಲ್ಲಿ ತಿದ್ದುಪಡಿಗಳನ್ನು ಮಾಡಬೇಕು. ಈ ಪ್ರಕ್ರಿಯೆಯನ್ನು ಕನಿಷ್ಠ ಒಂದು ವರ್ಷದ ಅವಧಿ ನಿಗದಿಮಾಡಬೇಕು ಎಂದರು.

ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಅಲೆಮಾರಿಗಳು, ಆದಿವಾಸಿಗಳು, ದಲಿತರು, ಬಡ ಅಲ್ಪಸಂಖ್ಯಾತರು ಮುಂತಾದ ದಾಖಲೆಗಳ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜನ ವರ್ಗಗಳು ಪ್ರಜಾತಾಂತ್ರಿಕ ಪ್ರಕ್ರಿಯೆಯಿಂದ ವಂಚಿತರಾಗದಂತೆ ವಿಶೇಷ ಸರಳ ಕ್ರಮಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಮರೆಪ್ಪ ಚಟ್ಟೇರಕರ್, ಮಲ್ಲಿಕಾರ್ಜುನ ಕ್ರಾಂತಿ, ಇರ್ಫಾನ್ ಬಾದಲ್, ನೀಲಕಂಠ ಬಡಿಗೇರ, ಮಲ್ಲಿಕಾರ್ಜುನ ಪೂಜಾರಿ, ಬಾಷುಮಿಯಾ ವಡಗೇರಾ, ಗೋಪಾಲ ತೆಳಗೇರಿ, ಶ್ರೀಶೈಲ್ ಹೊಸಮನಿ, ಭೀಮರಾಯ ಠಾಣಗುಂದಿ, ಚನ್ನಪ್ಪ ಆನೆಗುಂದಿ, ಲಾಲಪ್ಪ ತಲಾರಿ, ಬಸವರಾಜ ಗುಡಿಮನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-30-1169677019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.