ನವದೆಹಲಿ (ಪಿಟಿಐ): ಕೇರಳ, ಅಸ್ಸಾಂ ಹಾಗೂ ಪುದುಚೆರಿಯಲ್ಲಿ ಏಪ್ರಿಲ್ 9ರಂದು (ಗುರುವಾರ) ಮತದಾನ ನಡೆಯಲಿದ್ದು, ಮತದಾರರು ಅಭ್ಯರ್ಥಿ ಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಎರಡು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಒಂದೇ ಹಂತ ದಲ್ಲಿ ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಕೇರಳದಲ್ಲಿ 30,471 ಮತಗಟ್ಟೆ ಗಳಿದ್ದರೆ, ಅಸ್ಸಾಂನಲ್ಲಿ 31,486, ಪುದುಚೆರಿಯಲ್ಲಿ 1,099 ಮತಗಟ್ಟೆ ಗಳಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಾಂಗ್ರೆಸ್, ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳಿಗೆ ಈ ಚುನಾವಣೆಯು ಪ್ರತಿಷ್ಠೆಯ ಕಣವಾಗಿದ್ದು, ಒಂದು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿವೆ.

ಅಂಚೆ ಮತದಾನಕ್ಕೆ ನೂತನ ಮಾರ್ಗಸೂಚಿ (ಕೋಲ್ಕತ್ತ ವರದಿ): ಅಂಚೆ ಮತದಾನ ಪ್ರಕ್ರಿಯೆಯನ್ನು ಬಲಗೊಳಿಸಲು ಚುನಾವಣಾ ಆಯೋಗ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು, ಮತಗಟ್ಟೆಗಳಲ್ಲಿ ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆ ಮತ್ತು ವೀಕ್ಷಕರ ನಿಯೋಜನೆಯನ್ನು ಅದು ಕಡ್ಡಾಯಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.

ತಮಿಳುನಾಡಿನಲ್ಲಿ ಏ.23ರಂದು, ಪಶ್ಚಿಮಬಂಗಾಳದಲ್ಲಿ ಏ.23 ಮತ್ತು 29ರಂದು ಮತದಾನ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-51-432612440

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.