ತಿರುವನಂತಪುರ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೇರಳಂನ ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರು. ಒಂದು ವೇಳೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಅವರು ಪ್ರತಿನಿಧಿಸಿರುವ ಆಲಪ್ಪುಳ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವೇಣುಗೋಪಾಲ್ ಅವರು ಮುಖ್ಯಮಂತ್ರಿಯಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಈ ಕ್ಷೇತ್ರವು ಸಿಪಿಎಂ ಮತ್ತು ಕಾಂಗ್ರೆಸ್ ನಡುವಿನ ಪೈಪೋಟಿಯ ಕಣ. ಆದರೂ, ಕಾಂಗ್ರೆಸ್ನ ಹಿರಿಯ ನಾಯಕ ಈ ಹಿಂದೆ ಆಲಪ್ಪುಳದಲ್ಲಿ ಸೋಲು ಕಂಡಿದ್ದರು. ಆದ್ದರಿಂದ, ಈ ಕ್ಷೇತ್ರ ಈಗ ಕಾಂಗ್ರೆಸ್ನ ಭದ್ರಕೋಟೆಯಾಗಿ ಉಳಿದಿಲ್ಲ.

ಈ ಅಪಾಯದ ಬಗ್ಗೆ ಕಾಂಗ್ರೆಸ್ ಮತ್ತು ಮೈತ್ರಿಕೂಟದ ನಾಯಕರು ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘2024ರ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಸ್ಪರ್ಧಿಸಿದ್ದಾಗ ಪಕ್ಷವು ಶೇ 11ರಷ್ಟು ಮತಗಳನ್ನು ಪಡೆದಿತ್ತು. ಇದನ್ನು ಗಮನಿಸಿದರೆ, ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚು’ ಎಂದು ಪತ್ರಕರ್ತ ಜಯಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕೇರಳಂನ ಮೂರು ವಿಧಾನಸಭಾ ಕ್ಷೇತ್ರ ಮತ್ತು ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿನ ಗೆಲುವು ಬಿಜೆಪಿಯ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

2024ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ವೇಣುಗೋಪಾಲ್ ಅವರಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನ ಬಿಜೆಪಿ ಪಾಲಾಗಿದ್ದರಿಂದ ಕಾಂಗ್ರೆಸ್ ಸಾಕಷ್ಟು ಟೀಕೆಯನ್ನು ಎದುರಿಸಿತ್ತು.

ಇದಲ್ಲದೆ, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಭ, ಹಾಲಿ ಸಂಸದರು ಸ್ಪರ್ಧಿಸಬಾರದು ಎಂಬ ಪಕ್ಷದ ನಿಯಮ ಉಲ್ಲೇಖಿಸಿ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿತ್ತು. ವೇಣುಗೋಪಾಲ್ಗೆ ವಿನಾಯಿತಿ ನೀಡಿದರೆ, ವಿಧಾನಸಭೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದ ಸಂಸದರ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.

ಒಂದು ವೇಳೆ, ವಿಧಾನಸಭಾ ಉಪ ಚುನಾವಣೆ ನಡೆದರೆ, ಕಾಂಗ್ರೆಸ್ನ ಯಾವುದೇ ಭದ್ರಕೋಟೆಯಿಂದ ಸ್ಪರ್ಧಿಸಿ ಗೆಲ್ಲುವುದು ವೇಣುಗೋಪಾಲ್ ಅವರಿಗೆ ಕಷ್ಟವಲ್ಲದಿದ್ದರೂ, ಪಕ್ಷದೊಳಗಿನ ಒಳಜಗಳವು ಅವರ ಗೆಲುವಿನ ಅಂತರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-79924330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.