ಬಂಗಾರಪೇಟೆ: ರಾಜ್ಯದಲ್ಲಿ ಸದ್ಯ ಉಂಟಾಗಿರುವ ತೀವ್ರ ರಾಜಕೀಯ ಏರುಪೇರು ಹಾಗೂ ಮುಖ್ಯಮಂತ್ರಿ ಬದಲಾವಣೆ ವಿದ್ಯಮಾನಗಳ ಹಿನ್ನೆಲೆ ಮುಂದಿನ 8 ರಿಂದ 10 ತಿಂಗಳ ಅವಧಿಯೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಜರುಗುವುದು ನಿಶ್ಚಿತ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಗುರುವಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರದ ಬಿಜೆಪಿ ಸರ್ಕಾರದ ಪ್ರತಿಯೊಂದು ಐತಿಹಾಸಿಕ ಹಾಗೂ ಜನಪರ ಯೋಜನೆಗಳನ್ನು ಕಾರ್ಯಕರ್ತರು ಎಲ್ಲರಿಗೂ ತಲುಪಿಸಬೇಕು. . ಮುಂಬರುವ ಜಿ.ಪಂ, ತಾ.ಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಮತದಾರರನ್ನು ಸೆಳೆಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಮುಕ್ತಗೊಳಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಗೊಂದಲದ ರಾಜಕಾರಣದಿಂದಾಗಿ ಜನಪರ ಕೆಲಸಗಳು ಸಂಪೂರ್ಣ ಕುಂಠಿತಗೊಂಡಿವೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿಯಾದರೂ ನಿರೀಕ್ಷಿತ ಮಟ್ಟದ ಪ್ರಗತಿ ಸಾಧ್ಯವಿಲ್ಲ ಎಂದರು.

ಓಂಶಕ್ತಿ ಚಲಪತಿ, ಬಿ.ಪಿ.ವೆಂಕಟಮುನಿಯಪ್ಪ, ಬಿ.ವಿ.ಮಹೇಶ್, ಮಂಡಲ ಅಧ್ಯಕ್ಷ ಸಂಪಂಗಿರೆಡ್ಡಿ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕಪಾಲಿಶಂಕರ್, ಮಾರ್ಕಂಡೇಗೌಡ, ಶ್ರೀನಿವಾಸಗೌಡ, ಚೌಡಪ್ಪ, ಸೀತಾರಾಮಪ್ಪ, ಶಶಿಕುಮಾರ್, ರಾಧಮ್ಮ, ಹೊಸರಾಯಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-663638455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.