ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು!

Published 20 ಏಪ್ರಿಲ್ 2024, 4:24 IST
Last Updated 20 ಏಪ್ರಿಲ್ 2024, 4:24 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ‘ಗ್ಯಾರಂಟಿ’ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ ಎಂಬ ಅಪಪ್ರಚಾರವನ್ನು ಬಿಜೆಪಿ, ಜೆಡಿಎಸ್‌ನವರು ಮಾಡುತ್ತಿದ್ದಾರೆ. 2028ರಲ್ಲೂ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಗ್ಯಾರಂಟಿ ಯೋಜನೆಗಳು ಆಗಲೂ ಮುಂದುವರಿಯಲಿವೆ.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ಶಕ್ತಿ ತುಂಬುತ್ತಿವೆ. ಜನರು ಆ ಯೋಜನೆಗಳ ಪರ ಇದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕಂಗೆಟ್ಟಿರುವ ಬಿಜೆಪಿ, ಜೆಡಿಎಸ್‌ನವರು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ 

ಸಿದ್ದರಾಮಯ್ಯ, ಮುಖ್ಯಮಂತ್ರಿ

(ಮಾಲೀಕಯ್ಯ ಗುತ್ತೇದಾರ್, ಶಾರದಾ ಮೋಹನ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ)

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಕಾರ್ಯಕರ್ತರು ಒತ್ತಡ ಹಾಕಿ ಮಂಡ್ಯ ಕ್ಷೇತ್ರದಿಂದ ನಿಲ್ಲಿಸಿದ್ದಾರೆ. ಗೆದ್ದರೆ ಕೃಷಿ ಸಚಿವನಾಗಿ ಗ್ರಾಮೀಣ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಯತ್ನಿಸುವೆ. ಇನ್ನೊಂದು ವರ್ಷದಲ್ಲಿ ಕುಂಚಿಟಿಗ ಮತ್ತು ಕಾಡುಗೊಲ್ಲರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತದೆ.

ಎಚ್‌.ಡಿ.ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT