ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥ ಮಾತು

Published 23 ಮಾರ್ಚ್ 2024, 23:37 IST
Last Updated 23 ಮಾರ್ಚ್ 2024, 23:37 IST
ಅಕ್ಷರ ಗಾತ್ರ
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು, ತೆನೆ ಹೊತ್ತ ಮಹಿಳೆ ತೆನೆ ಬಿಸಾಡಿದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಪ್ರಬುದ್ಧವಾಯಿತು, ಕರ್ನಾಟಕ ಸಮೃದ್ಧವಾಯಿತು.
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ರಾಷ್ಟ್ರಭಕ್ತರ ಬಳಗ ಹೆಸರಿನಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಎದುರಿಸುವೆ. ರಾಷ್ಟ್ರಭಕ್ತ ಮುಸ್ಲಿಮರೂ ಬೆಂಬಲ ಸೂಚಿಸುತ್ತಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ವಿರುದ್ಧ ಅಸಮಾಧಾನ ಹೊಂದಿರುವ ದೊಡ್ಡ ಸಂಖ್ಯೆಯ ಮತದಾರರು ನನ್ನೊಂದಿಗೆ ಇದ್ದಾರೆ. 
ಕೆ.ಎಸ್. ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ
ಸ್ವಾತಂತ್ರ್ಯಾನಂತರ ಕೇಂದ್ರದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರ, ದುರಾಡಳಿತ, ಕುಟುಂಬ ರಾಜಕಾರಣ ಮತ್ತು ಸ್ವಜನಪಕ್ಷಪಾತಕ್ಕೆ ಕುಖ್ಯಾತವಾಗಿತ್ತು. ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ‘ಇಂಡಿಯಾ’ ಒಕ್ಕೂಟವು ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಕಾರಾತ್ಮಕ ಕೆಲಸಗಳಿಂದ ಇದು ಸಾಧ್ಯವಾಗಲಿದೆ. ಅವರ ಹತ್ತು ವರ್ಷಗಳ ಆಡಳಿತದಲ್ಲಿ ಸಮಾಜದ ಎಲ್ಲಾ ವರ್ಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ
ಸರ್ವಾನಂದ ಸೋನೊವಾಲ್, ಕೇಂದ್ರ ಸಚಿವ
‘ಇಂಡಿಯಾ’ ಮೈತ್ರಿಕೂಟವು ‘ಫಿಲ್ಟರ್‌ ಕಾಫಿ’ ಇದ್ದಂತೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಅದು ಹೊಸ ಹುರುಪು ಪಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಕಡೆಗಣಿಸಬೇಡಿ. ರಾಜಕೀಯದಲ್ಲಿ ಮರಳಿ ಪುಟಿದೆದ್ದು ಬಂದಿರುವ ಇತಿಹಾಸ ಕಾಂಗ್ರೆಸ್ ಪಕ್ಷಕ್ಕಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದಾದ್ಯಂತ ‘ಕ್ರಾಂತಿಕಾರಿ’ ಯಾತ್ರೆಗಳನ್ನು ನಡೆಸುವ ಮೂಲಕ ಪಕ್ಷಕ್ಕೆ ಉತ್ತೇಜನ ನೀಡಿದ್ದಾರೆ. ಈ ಬಾರಿಯ ಚುನಾವಣೆಯ ಫಲಿತಾಂಶ ಪ್ರಕಟವಾದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಗೇಮ್‌ ಚೇಂಜರ್‌’ ಆಗಲಿದ್ದಾರೆ
ಶತ್ರುಘ್ನ ಸಿನ್ಹಾ, ಟಿಎಂಸಿ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT