ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 11 ಏಪ್ರಿಲ್ 2024, 23:30 IST
Last Updated 11 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿದ್ದ ನಮ್ಮ ದೇಶದ ಇಂದಿನ ಪರಿಸ್ಥಿತಿಯನ್ನು ಜನರು ಗಮನಿಸುತ್ತಿದ್ದಾರೆ. ಇಂದು ಕಾನೂನು ಮತ್ತು ಸುವ್ಯವಸ್ಥೆ ಹೇಗಿದೆ? ದೇಶದ ನಿರುದ್ಯೋಗ ಮಟ್ಟ ಏನು? ನಮ್ಮ ಮಾಧ್ಯಮಗಳು ಮುಕ್ತವಾಗಿವೆಯೇ? ಆರೋಗ್ಯ ಮತ್ತು ಬಡತನ ಸೂಚ್ಯಂಕದಲ್ಲಿ ನಾವು ಎಲ್ಲಿದ್ದೇವೆ? ನಮ್ಮ ದೇಶದ ಗಡಿಗಳು ಯಾಕೆ ಕುಗ್ಗುತ್ತಿವೆ? ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಜನರು ಮತ ಹಾಕಲಿದ್ದಾರೆ ಮತ್ತು ಅವರು ಬದಲಾವಣೆ ತರಲು ಬಯಸಿದ್ದಾರೆ

-ಅಖಿಲೇಶ್‌ ಯಾದವ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ

***

ಹಿಂದೂ, ಮುಸ್ಲಿಂ, ಕ್ರೈಸ್ತ ಮತ್ತು ಯಹೂದಿಗಳನ್ನು ಬಿಜೆಪಿಯು ಸಮಾನವಾಗಿ ನೋಡುತ್ತಿದೆ. ಭಾರತದಲ್ಲಿ ಹುಟ್ಟಿರುವ ಎಲ್ಲರೂ ಭಾರತ ಮಾತೆಯ ಮಕ್ಕಳು ಎಂದು ನಾವು ನಂಬಿದ್ದೇವೆ. ಯಾರಿಗೂ ತಾರತಮ್ಯ ಮಾಡುವುದಿಲ್ಲ. ಬಿಜೆಪಿಯು ಮಹಿಳೆಯರಿಗೆ ಗೌರವ ನೀಡುತ್ತದೆ. ಈ ಕಾರಣಕ್ಕಾಗಿಯೇ ತ್ರಿವಳಿ ತಲಾಖ್‌ ಅನ್ನು ನಿಷೇಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಪ್ರಬಲವಾಗುತ್ತಿದೆ. ಭಾರತದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಮೋದಿ ಅವರು ಮಧ್ಯಪ್ರವೇಶಿಸಿ ನಾಲ್ಕೂವರೆ ಗಂಟೆಗಳ ಕಾಲ ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧವನ್ನು ನಿಲ್ಲಿಸಿದ್ದಾರೆ

-ರಾಜನಾಥ್‌ ಸಿಂಗ್, ರಕ್ಷಣಾ ಸಚಿವ

ರಾಜನಾಥ್‌ ಸಿಂಗ್‌
ರಾಜನಾಥ್‌ ಸಿಂಗ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT