ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 11 ಏಪ್ರಿಲ್ 2024, 23:30 IST
Last Updated 11 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಪ್ರಚಾರದ ಸಂದರ್ಭ ನಾನು ನರೇಂದ್ರ ಮೋದಿ ಪೋಟೋ ಬಳಸಬಾರದು ಎಂದು ಬಿಜೆಪಿಯವರು ಹೇಳುತ್ತಾರೆ. ಹಾಗಿದ್ದರೆ ಯಡಿಯೂರಪ್ಪ, ರಾಘವೇಂದ್ರ ಮತ್ತು ವಿಜಯೇಂದ್ರ ಅವರ ಫೋಟೊ ಇಟ್ಟುಕೊಂಡು ಹೋಗಿ ಚುನಾವಣೆ ಗೆದ್ದು ತೋರಿಸಲಿ ನೋಡೋಣ. ಮೋದಿ ಯಾರಪ್ಪನ ಮನೆಯ ಆಸ್ತಿಯೂ ಅಲ್ಲ. ತಾಕತ್ತಿದ್ದರೆ ಯಡಿಯೂರಪ್ಪ ಕುಟುಂಬದವರು ನರೇಂದ್ರ ಮೋದಿ ಫೋಟೊ ಬಿಟ್ಟು ಪ್ರಚಾರ ಮಾಡಿ ಗೆಲ್ಲಲಿ

-ಕೆ.ಎಸ್‌. ಈಶ್ವರಪ್ಪ, ಬಿಜೆಪಿ ಮುಖಂಡ

**

ಈಶ್ವರಪ್ಪನವರ ಉದ್ಧಟತನದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಅದು ಅವರ ಹಣೆಬರಹ. ಏನಾಗುತ್ತೋ ಆಗಲಿ. ಯಡಿಯೂರಪ್ಪ ಹಾಗೂ ಅವರ ಮಕ್ಕಳ ಪೊಟೋ ಹಾಕಿ ಪ್ರಚಾರ ಮಾಡಲಿ ಎಂಬ ಬಗ್ಗೆಯೂ ಮಾತನಾಡುವುದಿಲ್ಲ. ಯಾರ ಫೋಟೊ ಹಾಕಬೇಕೆಂಬುದನ್ನು ನಾವು ತೀರ್ಮಾನಿಸುತ್ತೇವೆ

-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT