ಮಂಡ್ಯ: ಪಂಚರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಗೆಲುವಿಗೆ ಜನಾಶೀರ್ವಾದ ಮಾಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಹರ್ಷ ವ್ಯಕ್ತಪಡಿಸಿದರು.

ನಗರದ ಜೆ.ಸಿ. ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ವಿಜಯೋತ್ಸವ ಆಚರಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಜೈಕಾರ ಕೂಗಿದರು.

ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರಾಡಳಿತವನ್ನು ಅಂತ್ಯಗೊಳಿಸಿ, ಬಿಜೆಪಿಗೆ ಬಹುಮತ ನೀಡುವ ಮೂಲಕ ಜನ ಆಶೀರ್ವಾದ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವರ ಆಡಳಿತ ವೈಖರಿಗೆ ಜನ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ನುಡಿದರು.

ಭಾರಿ ಗೊಂದಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆ ಫಲಿತಾಂಶ ಹೊರಬಿದ್ದು, ಸೋತಿದ್ದ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆದ್ದಿದ್ದಾರೆ. 52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ಗೆ ಜಯ ಸಿಕ್ಕಿದೆ. ಚುನಾವಣಾಧಿಕಾರಿಯಿಂದ ಇ-ಮೇಲ್ ಮೂಲಕ ಅಧಿಕೃತ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ಸಿಪಿಎಂ ಆಳ್ವಿಕೆ ಕೊನೆಗೊಂಡಿದೆ. ಮುಂದಿನ ಚುನಾವಣೆಯಲ್ಲಿ ದಕ್ಷಿಣ ರಾಜ್ಯಗಳಲ್ಲೂ ಬಿಜೆಪಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ಮುಖಂಡ ಸಿದ್ದರಾಮಯ್ಯ, ರೈತ ಮೋರ್ಚಾ ಕಾರ್ಯದರ್ಶಿ ಎಚ್.ಆರ್. ಅಶೋಕ್ಕುಮಾರ್, ಮಾಧ್ಯಮ ವಕ್ತಾರ ಸಿ.ಟಿ. ಮಂಜುನಾಥ್, ನಾಗನಾಂದ್, ನಗರಾಧ್ಯಕ್ಷ ಪ್ರಸನ್ನ ಹೊಸಹಳ್ಳಿ, ರಮೇಶ್ ವಿಶ್ವಕರ್ಮ, ಭೀಮೇಶ್, ಚಾಮರಾಜ್, ರಾಶಿಸಿದ್ದರಾಜ್, ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು, ಯೋಗೇಶ್ ಇದ್ದರು.

ಶ್ರೀರಂಗಪಟ್ಟಣ ವರದಿ: ಐದು ರಾಜ್ಯಗಳ ಸಾರ್ವತ್ರಿಕ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.

ಪಕ್ಷದ ಮುಖಂಡ ಇಮಡುವಾಳು ಸಚ್ಚಿದಾನಂದ ಮಾತನಾಡಿ, ‘ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಜನರು ಬೆಂಬಲ ಇದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ’ ಎಂದರು.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಕಾರ್ಯಕಾರಿಣಿ ಸದಸ್ಯ ಎಸ್. ಸಿದ್ದರಾಮಯ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಟಿ. ಶ್ರೀಧರ್, ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್. ರಮೇಶ್ ಮಾತನಾಡಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಜಿ.ಇ. ಸುಧಾಕರ್, ಹಿಂದುಳಿದ ವರ್ಗಗಳ ಘಟಕದ ಜಿಲ್ಲಾ ಉಪಾಧ್ಯಕ್ಷ ಎಲ್. ಮಂಜುನಾಥ್, ಮುಖಂಡರಾದ ಗಂಜಾಂ ಶಿವು, ಜಯಲಕ್ಷ್ಮಮ್ಮ, ಎಚ್.ಎಸ್. ಪುಟ್ಟರಾಮು, ಉಮೇಶಕುಮಾರ್, ಮೊಳ್ಳೇನಹಳ್ಳಿ ಚಂದ್ರು, ಹೇಮಂತಕುಮಾರ್, ಕಿರಣ್ ಸಿಂಗ್, ಅಭಿಷೇಕ್ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-40-1212747716

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.