ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.6ರಂದು ಚುನಾವಣಾ ಪ್ರಚಾರ ಸಭೆಯೊಂದರಲ್ಲಿ, ‘ಆರ್ಎಸ್ಎಸ್ ಹಾಗೂ ಬಿಜೆಪಿ ವಿಷಕಾರಿ ಹಾವುಗಳಂತೆ. ಹಾವು ಬಂದರೆ, ನಮಾಜ್ ಅನ್ನು ಅರ್ಧಕ್ಕೆ ನಿಲ್ಲಿಸಿ ಅದನ್ನು ಕೊಲ್ಲಬೇಕು ಎಂದು ಹೇಳಲಾಗುತ್ತದೆ. ಈ ಹಾವು ಗಳನ್ನು ನೀವು ಕೊಲ್ಲಬೇಕು. ಇಲ್ಲವಾದರೆ ಅವರು ನಿಮ್ಮನ್ನು ಕೊಲ್ಲುತ್ತಾರೆ’ ಎಂದು ಹೇಳುವ ಮೂಲಕ ಗುಂಪು ಹತ್ಯೆಗೆ ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಪ್ರದೀಪ್ ಸರಿಪಲ್ಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖರ್ಗೆ ಅವರ ಮಾತು ಸೌಹಾರ್ದ ಪರಂಪರೆಗೂ ಅಪಾಯಕಾರಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷತ್ತಿನ ಉಳ್ಳಾಲ ಪ್ರಖಂಡದ ವತಿಯಿಂದ ಇದೇ 12ರಂದು ಕದ್ರಿ ಮಂಜುನಾಥ ದೇವಸ್ಥಾನದಿಂದ ಕುತ್ತಾರಿನಲ್ಲಿರುವ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕದ್ರಿ ದೇವಸ್ಥಾನದಲ್ಲಿ ಬೆಳಿಗ್ಗೆ 6ಕ್ಕೆ ಮಂಜುನಾಥ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆಯನ್ನು ಆರಂಭಿಸಲಿದ್ದೇವೆ. ಕುತ್ತಾರಿನಲ್ಲಿ ಪಾದಯಾತ್ರೆಯ ಸಮಾರೋಪ ನಡೆಯಲಿ’ ಎಂದರು.

ವಿಶ್ವ ಹಿಂದೂ ಪರಿಷತ್ತಿನ ಪ್ರಮುಖ ರಾದ ಪ್ರವೀಣ್ ಕುತ್ತಾರ್, ನವೀನ್ ಕೊಣಾಜೆ, ಸಂತೋಷ್ ಕದ್ರಿ, ರವಿ ಅಸೈ ಗೋಳಿ, ದೀಪಕ್ ಮರೋಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-29-852491737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.