ಮೈಸೂರು: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಪಶ್ಚಿಮಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿಗೆ ಬಹುಮತ ಸಿಗುತ್ತಿದ್ದಂತೆ ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಕೇಂದ್ರ ನಾಯಕರ ಪರವಾಗಿ ಜೈಕಾರ ಕೂಗಿದರು.

ಶಾಸಕ ಟಿ.ಎಸ್. ಶ್ರಿವತ್ಸ ಮಾತನಾಡಿ, ‘ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ಕಡೆ ಐತಿಹಾಸಿಕ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ದುರಾಡಳಿತ ಅಂತ್ಯಗೊಂಡಿದೆ’ ಎಂದರು.

‘ಸಂವಿಧಾನ ವಿರೋಧಿಯಾಗಿ ನಡೆದುಕೊಂಡ ಮಮತಾ ಬ್ಯಾನರ್ಜಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಅಸ್ಸಾಂ ಮತ್ತು ಪುದುಚೇರಿಯಲ್ಲೂ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

‘ಪಶ್ಚಿಮ ಬಂಗಾಳದಂತೆ ಕರ್ನಾಟದಲ್ಲೂ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ. ಮುಂಬರುವ ಕರ್ನಾಟಕದ ಚುನಾವಣೆಯಲ್ಲೂ ಪಶ್ಚಿಮ ಬಂಗಾಳದ ಮಾದರಿಯಲ್ಲೇ ಫಲಿತಾಂಶ ಬರಲಿದೆ. ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಅನುಕಂಪ ಕೆಲಸ ಮಾಡಿದೆ. ಉಪ ಚುನಾವಣೆಯಲ್ಲಿ ಮತದಾರರು ಆಡಳಿತಾರೂಢ ಪಕ್ಷಕ್ಕೆ ಮತ ಹಾಕುವುದು ವಾಡಿಕೆ. ನಾವು ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅದು ಮರುಕಳಿಸಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಕಾಣಲಿದೆ’ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಮಾತನಾಡಿ, ‘ಪಶ್ಚಿಮ ಬಂಗಾಳವನ್ನು ಹಿಂಸಾಚಾರ, ಭಯದ ನಾಡಾನ್ನಾಗಿಸಿದ ಹಾಗೂ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ಕೊಟ್ಟ ಮಮತಾ ಬ್ಯಾನರ್ಜಿ ಅವರ ರಾಜಕೀಯ ಬದುಕು ಅಂತ್ಯಗೊಂಡಿದೆ. ದೇಶದ ಭದ್ರತೆಗೆ ಪ್ರಧಾನಿ ನರೇಂದ್ರ ಮೋದಿಯೇ ಸೂಕ್ತ ಎಂದು ಜನರು ತೀರ್ಮಾನಿಸಿದ್ದಾರೆ’ ಎಂದರು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆ.ಎನ್. ಸುಬ್ಬಣ್ಣ, ನಗರ ವಕ್ತಾರ ಎಂ.ಎ. ಮೋಹನ್, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಕೇಬಲ್ ಮಹೇಶ್, ಮಿರ್ಲೆ ಶ್ರೀನಿವಾಸ ಗೌಡ, ಡಾ. ಇ. ಸಿ. ನಿಂಗರಾಜೇ ಗೌಡ, ಮಂಗಳಾ ಸೋಮಶೇಖರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-39-1200236623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.