ಮೈಸೂರು: ‘ದುರಾಡಳಿತ, ಗಾಂಧಿ ಕುಟುಂಬಕ್ಕೆ ಒತ್ತು ನೀಡುವ ಕಾಂಗ್ರೆಸ್ ಪಕ್ಷವು ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲು ಕಂಡು ಅವನತಿಯತ್ತ ಸಾಗುತ್ತಿದ್ದು, ರಾಜ್ಯದಲ್ಲೂ ಅಂತ್ಯವಾಗಲಿದೆ’ ಎಂದು ಮಾಜಿ ಮೇಯರ್ ಶಿವಕುಮಾರ್ ಹೇಳಿದ್ದಾರೆ.

‘ಪಶ್ಚಿಮಬಂಗಾಳ, ತಮಿಳುನಾಡು, ಅಸ್ಸಾಂ ರಾಜ್ಯಗಳಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ದಾಟದೆ ಇರುವುದು ಆ ಪಕ್ಷದ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಗೆಲ್ಲಿಸುತ್ತೇವೆಂದು ಉಸ್ತುವಾರಿ ಹೊತ್ತಿದ್ದ ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ದೊಡ್ಡ ಪಾಠ ಕಲಿತಿದೆ. ಪ್ರಧಾನಿ ನರೇಂದ್ರಮೋದಿ ಅವರ ನಾಯಕತ್ವಕ್ಕೆ ಮತದಾರರು ಮನ್ನಣೆ ನೀಡಿರುವುದು ಸಾಬೀತಾಗಿದೆ’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿಯೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-39-1327931148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.