ಮೈಸೂರು: ‘2028ರ ಚುನಾವಣೆಯನ್ನು ಗುರಿಯಾಗಿಸಿ ಕೊಂಡು ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್) ನೆಪದಲ್ಲಿ ರಾಜ್ಯದ 86 ಲಕ್ಷ ಮತದಾರರನ್ನು ಕೈಬಿಡಲು ಬಿಜೆಪಿ ಹುನ್ನಾರ ನಡೆಸಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

‘ಕರ್ನಾಟಕದಲ್ಲಿ 5.5 ಕೋಟಿ ಮತದಾರರಲ್ಲಿ ಶೇ 15ರಷ್ಟು, ಅಂದಾಜು 86 ಲಕ್ಷ ಮಂದಿಯನ್ನು ಕೈಬಿಡಲಾಗುತ್ತಿದೆ. ಜಿಲ್ಲೆಯ 11 ಕ್ಷೇತ್ರಗಳಲ್ಲಿ 3.48 ಲಕ್ಷ ಮತದಾರರನ್ನು ಕೈಬಿಡಲಾಗುತ್ತಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 71 ಸಾವಿರ, ನರಸಿಂಹರಾಜ ಕ್ಷೇತ್ರದಲ್ಲಿ 45 ಸಾವಿರ ಮುಸ್ಲಿಂ ಮತದಾರರನ್ನು ಒಳಗೊಂಡಂತೆ 60 ಸಾವಿರ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ವಿಶೇಷ ಮತದಾರರ ಪರಿಷ್ಕರಣೆ ವಿರುದ್ಧ ಸುಗ್ರೀವಾಜ್ಞೆ ತರಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ’ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮತದಾರರ ಆಶೀರ್ವಾದದಿಂದ ಚುನಾವಣೆಯಲ್ಲಿ ಗೆಲ್ಲಲಾಗದ ಬಿಜೆಪಿ ನಾಯಕರು, ಮತದಾರರನ್ನು ಕದಿಯುವ ಕೆಲಸ ಮಾಡುತ್ತಿದ್ದಾರೆ. ಹರಿಯಾಣದಲ್ಲಿ 65 ಲಕ್ಷ, ಬಿಹಾರದಲ್ಲಿ 85 ಲಕ್ಷ ಮತದಾರರನ್ನು ಕೈಬಿಟ್ಟು ಅಧಿಕಾರಕ್ಕೆ ಬಂದು ಈಗ ಪಶ್ಚಿಮ ಬಂಗಾಳದಲ್ಲಿ 92 ಲಕ್ಷ ಮತದಾರರನ್ನು ಕೈಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ’ ಎಂದು ಆರೋಪಿಸಿದರು.

ಸ್ವಾಗತಾರ್ಹ ತೀರ್ಪು: ‘ಶೃಂಗೇರಿ ಕ್ಷೇತ್ರದ ಮರು ಎಣಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ಬ್ಯಾಲೆಟ್ ಪೇಪರ್ಗಳನ್ನು ತಿದ್ದಲಾಗಿದೆ. ಬಿಜೆಪಿಯ ಕಾರ್ಯಕರ್ತರೇ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ವಿಚಾರಣೆಯಿಂದ ಗೊತ್ತಾಗಲಿದೆ’ ಎಂದರು.

‘ನೀಟ್ ಪರೀಕ್ಷೆಯಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ. ತಮಿಳುನಾಡು ರಾಜ್ಯದಂತೆ ಕರ್ನಾಟಕದಲ್ಲೂ ನೀಟ್ ಪರೀಕ್ಷೆಯನ್ನು ಬ್ಯಾನ್ ಮಾಡಬೇಕು’ ಎಂದು ಆಗ್ರಹಿಸಿದರು.

ಯದುವೀರ್ ವಿಫಲ: ‘ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ನೀಡಿದೆ. ಆದರೆ, ಕೇಂದ್ರದಿಂದ ಎನ್ಎಚ್ಐಎ ನಿಂದ ಬೈಪಾಸ್ ರಸ್ತೆಗೆ ಅನುಮೋದನೆ ಕೊಡಿಸಿಲ್ಲ. ಪ್ರಸಾದ್ ಯೋಜನೆ, ಯೂನಿಟಿ ಮಾಲ್ ಯೋಜನೆಗೆ ತಡೆಯಾಜ್ಞೆ ತರಲಾಗಿದೆ’ ಎಂದು ಟೀಕಿಸಿದರು.

ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಮುಖಂಡರಾದ ಬಿ.ಎಂ.ರಾಮು, ಎಂ.ಶಿವಣ್ಣ, ಕೆ.ಮಹೇಶ್, ಗಿರೀಶ್ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-39-1275758809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.