ನವಲಗುಂದ: ಎಸ್.ಐ.ಆರ್ ನೆಪದಲ್ಲಿ ದೇಶವ್ಯಾಪಿ ಕೋಟ್ಯಂತರ ಅಮಾಯಕ ಜನರ ಮತದಾನದ ಹಕ್ಕನ್ನು ಕಸಿಯಲು ಕೇಂದ್ರ ಚುನಾವಣಾ ಆಯೋಗ ಹೊರಟಿದೆ ಎಂದು ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಕಸ್ತೂರಿ ಹಳ್ಳದ ಆಕ್ರೋಶ ವ್ಯಕ್ತಪಡಿಸಿದರು.

ಎಸ್.ಐ.ಆರ್ ವಿರೋಧಿ ಜಾತ್ಯತೀತ ಪಕ್ಷಗಳ ಜನಪರ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಸುಧೀರ ಸಾಹುಕಾರ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದರು.

ಈಗಾಗಲೇ 13 ರಾಜ್ಯಗಳಲ್ಲಿ ಎಸ್.ಐ.ಆರ್ ಪರಿಷ್ಕರಣೆ ನಡೆಸಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರ ಹಾಕಲಾಗಿದ್ದು ಈ ಕೂಡಲೇ ಕರ್ನಾಟಕದಲ್ಲಿ ಈ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಸಾಂತ್ವನ ಕೇಂದ್ರದ ಕಾರ್ಯಕರ್ತೆ ಸವಿತಾ ಸರನಾಡಗೌಡರ ಮಾತನಾಡಿ, ಸದ್ಯ ನಡೆಯುತ್ತಿರುವ ಎಸ್.ಐ.ಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ವಿರೋಧವಿಲ್ಲ. ಮತದಾರರ ತೀವ್ರ ಪರಿಷ್ಕರಣೆ ವೇಳೆ ಜನರನ್ನೆಲ್ಲಾ ಆರೋಪಿಗಳಂತೆ ಕಾಣುವ, ಅಮಾಯಕ ಜನರನ್ನು ಪರದಾಡುವಂತೆ ಮಾಡುವ ಮೂಲಕ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕುವ ಕೆಲಸ ಜನ ವಿರೋಧಿಯ ಕೆಲಸವಾಗಿದೆ ಎಂದರು.

ಮಹಿಳಾ ಸಾಂತ್ವನ ಕೇಂದ್ರದ ಕಾರ್ಯಕರ್ತೆ ಕಾವೇರಿ ಗುಡಿಸಾಗರ ಮಾತನಾಡಿ, ಕಾಗದದ ಗದ್ದಲಗಳಲ್ಲಿ ಇದುವರೆಗೆ ಮತದಾರರ ಪಟ್ಟಿಯಲ್ಲಿ ಅತೀ ಹೆಚ್ಚು ಡಿಲೀಟ್ ಆಗಿರುವವರು ವಿವಾಹಿತ ಮಹಿಳೆಯರು, ಅಲೆಮಾರಿ ಆದಿವಾಸಿ ದಲಿತ ಸಮುದಾಯಗಳ, ಗ್ರಾಮೀಣ ಭಾಗದ ಬಡವರು ಹಾಗೂ ಅಲ್ಪಸಂಖ್ಯಾತರು, ಈ ಎಸ್.ಐ.ಆರ್ನ ಅಸಲಿ ಉದ್ದೇಶ ಬೇರೆಯೇ ಇದೆ ಎಂದರು.

ಸಾಮಾಜಿಕ ಕಾರ್ಯಕರ್ತೆ ಗಿರಿಜಾ ಹೂಗಾರ, ಶ್ರುತಿ ಬೆಂಡಿಗೇರಿ, ಆರ್.ಟಿ.ಐ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ, ಮಲ್ಲಿಕಾರ್ಜುನಸ್ವಾಮಿ ಮಠಪತಿ, ಶಿವಲಿಂಗಯ್ಯ ಹಿರೇಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-1340241966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.