ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 26 ಮೇ 2024, 0:42 IST
Last Updated 26 ಮೇ 2024, 0:42 IST
ಅಕ್ಷರ ಗಾತ್ರ

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಕೇಂದ್ರದಲ್ಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದ್ದೇವೆ. ರಾಹುಲ್ ಬಾಬಾ ಅವರು ವಿಶ್ರಾಂತಿ ಪಡೆಯಲು ಬ್ಯಾಂಕಾಕ್‌ಗೆ ತೆರಳಲಿದ್ದಾರೆ. ಐದು ಹಂತಗಳ ಮತದಾನ ನಡೆದಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು 310 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಆರು ಮತ್ತು ಏಳನೇ ಹಂತದ ಮತದಾನವು ಬಿಜೆಪಿಗೆ 400ಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಹಾಯಕವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಯೋತ್ಪಾದನೆಯ ವಿರುದ್ಧ ಹೋರಾಡಲಿದೆ. ದೇಶದ ಆರ್ಥಿಕ ಬೆಳವಣಿಯ ಖಾತರಿ ನೀಡಲಿದೆ ಮತ್ತು ಬಡವರ ಬಗ್ಗೆ ಕಾಳಜಿ ವಹಿಸಲಿದೆ

–ಅಮಿತ್‌ ಶಾ, ಕೇಂದ್ರ ಗೃಹ ಸಚಿವ

 ಅಶೋಕ್ ಗೆಹಲೋತ್

ಅಶೋಕ್ ಗೆಹಲೋತ್

ಮೋದಿ ಅವರು ತಮ್ಮ 10 ವರ್ಷದ ಸಾಧನೆಗಳೆಂದು ಹೇಳಿಕೊಳ್ಳುವ ನೋಟು ಅಮಾನ್ಯೀಕರಣ, ಜಿಎಸ್‌ಟಿ, ಅಗ್ನಿವೀರ್, ಕೃಷಿ ಕಾಯ್ದೆಗಳು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ‍ಪತ್ರಕರ್ತರು, ವಿದ್ಯಾರ್ಥಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಬಳಸಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ₹100 ದಾಟಿದ್ದು, ಅಡುಗೆ ಅನಿಲ ಸಿಲಿಂಡರ್ ಬೆಲೆ ₹1100 ದಾಟಿದ್ದರ ಬಗ್ಗೆ ಈ ಚುನಾವಣೆಯಲ್ಲಿ ಪ್ರಚಾರ ಮಾಡಲಿ

–ಅಶೋಕ್ ಗೆಹಲೋತ್, ಕಾಂಗ್ರೆಸ್ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT