ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಡಿ.ವಿ.ಸದಾನಂದ ಗೌಡ, ನಿರ್ಮಲ್ ಕುಮಾರ್ ಸುರಾನ ಸೇರಿ ಕೆಲವರ ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಬಿಜೆಪಿ ರಾಜ್ಯ ಘಟಕ ಕಳುಹಿಸಿದ್ದರೂ, ಲೋಕಸಭೆಯ ಮಾಜಿ ಸದಸ್ಯೆ ಸುಮಲತಾ ಅಂಬರೀಷ್ ಅವರ ಕುರಿತಂತೆ ಆ ಪಕ್ಷದ ವರಿಷ್ಠರು ಮಾಹಿತಿ ಪಡೆದುಕೊಂಡಿದ್ದಾರೆ.

ಹೀಗಾಗಿ, ಬಿಜೆಪಿಯ ಒಂದು ಸ್ಥಾನಕ್ಕೆ ಪೈಪೋಟಿ ಇನ್ನಷ್ಟು ತುರುಸಾಗಿದೆ. ಬಿಜೆಪಿ ಕಳುಹಿಸಿದ್ದ ಮೂಲ ಪಟ್ಟಿಯಲ್ಲಿ ಸುಮಲತಾ ಅವರ ಹೆಸರು ಇರಲಿಲ್ಲ. ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ವರಿಷ್ಠರ ಮನವಿಯ ಮೇರೆಗೆ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರಲಿಲ್ಲ. ಬಳಿಕ ಅವರು ಬಿಜೆಪಿಯನ್ನೂ ಸೇರಿಕೊಂಡರು. ಎನ್ಡಿಎ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಸುಮಲತಾ ಅವರು ಬಿಜೆಪಿ ಸೇರುವ ವೇಳೆಯಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಮಾನ ನೀಡುವುದಾಗಿ ವರಿಷ್ಠರು ಭರವಸೆ ನೀಡಿದ್ದರು ಎಂಬ ಮಾತು ಪಕ್ಷದ ವಲಯದಲ್ಲಿ ಚರ್ಚೆ ಆಗಿತ್ತು. ಆ ಬಳಿಕ ಸುಮಲತಾ ಅವರನ್ನು ಪಕ್ಷ ಮರೆತಿತ್ತು. ಈ ಬಾರಿ ರಾಜ್ಯಸಭೆಯ ಒಂದು ಸ್ಥಾನಕ್ಕೆ ಆಕಾಂಕ್ಷಿಗಳು ಹಲವರು ಇದ್ದರು. ಈಗ ಸುಮಲತಾ ಅವರ ಹೆಸರು ಮುನ್ನೆಲೆಗೆ ಬಂದಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಸುಮಲತಾ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಹಾಲಿ ಸದಸ್ಯ ಈರಣ್ಣ ಕಡಾಡಿ ಅವರು ಇನ್ನೊಂದು ಅವಧಿಗೆ ಮುಂದುವರಿಯಲು ಬಯಸಿದ್ದಾರೆ. ಆದರೆ, ಅವರ ಅಪೇಕ್ಷೆ ಈಡೇರುವ ಸಾಧ್ಯತೆ ತೀರಾ ಕಡಿಮೆ ಎಂದು ಮೂಲಗಳು ಹೇಳಿವೆ.

ರಾಜ್ಯಸಭೆ ಅಭ್ಯರ್ಥಿ ವಿಚಾರದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ತೀರ್ಮಾನವೇ ಅಂತಿಮವಾಗಲಿದೆ. ಎಲ್ಲರ ಲೆಕ್ಕಾಚಾರ ಮೀರಿ ಎಚ್.ಡಿ.ದೇವೇಗೌಡ ಅವರ ಪರ ಒಲವು ಬೀರುತ್ತಾರೋ ಅಥವಾ ದೇವೇಗೌಡರನ್ನು ನಾಮ ನಿರ್ದೇಶನ ಮಾಡಿ ಕರೆಸಿಕೊಳ್ಳುತ್ತಾರೊ ಕಾದು ನೋಡಬೇಕು ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೂ ಪೈಪೋಟಿ ಜೋರಾಗಿದೆ. ನಳಿನ್ ಕುಮಾರ್ ಕಟೀಲ್, ಶರಣು ತಳ್ಳಿಕೆರೆ, ರಘು ಕೌಟಿಲ್ಯ, ವೆಂಕಟೇಶ ದೊಡ್ಡೇರಿ, ಮಂಜುಳಾ, ನೆ.ಲ.ನರೇಂದ್ರಬಾಬು, ಎಂ.ಡಿ.ಲಕ್ಷ್ಮೀ ನಾರಾಯಣ, ಲಿಂಗರಾಜಪಾಟೀಲ, ಶೃತಿ, ಎನ್.ಮಹೇಶ್ ಮತ್ತು ಇತರರ ಹೆಸರು ವರಿಷ್ಠರಿಗೆ ಕಳುಹಿಸಲಾಗಿದೆ. ಇನ್ನು ಒಂದೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-1383979834

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.