ರಾಮನಗರ: ಎಲ್ಲೋ ಒಂದು ಕಡೆ ಟಿಕೆಟ್ ಕೊಡಲಿಲ್ಲವೆಂದು ಮುಸ್ಲಿಮರು ಕಾಂಗ್ರೆಸ್ ಬಗ್ಗೆ ತಪ್ಪು ಅಭಿಪ್ರಾಯಕ್ಕೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಅಲ್ಪಸಂಖ್ಯಾತರಿಗೆ ಹೆಚ್ಚು ಸೀಟು ಕೊಟ್ಟಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬೇರೆಯವರಲ್ಲ. ಬಿಜೆಪಿಯವರು ಒಂದೇ ಒಂದು ಸೀಟು ಸಹ ಕೊಟ್ಟಿಲ್ಲ ಎಂದರು.

ದಾವಣಗೆರೆ ಉಪ ಚುನಾವಣೆ ವಿಷಯದಲ್ಲಿ ಅಲ್ಪಸಂಖ್ಯಾತರ ಟಾರ್ಗೆಟ್ ಕುರಿತ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿ ಗುರುವಾರ ಅವರು ಪ್ರತಿಕ್ರಿಯಿಸಿದರು.

ಉಪ ಚುನಾವಣೆಯಲ್ಲಿ ಕೆಲವರ ವಿರುದ್ಧ ಪಕ್ಷದಿಂದ ಯಾತಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂಬ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಎಂದು ತಿಳಿಸಿದರು.

ಕಾಂಗ್ರೆಸ್ಗೆ ಅಲ್ಪಸಂಖ್ಯಾತರು ಶಕ್ತಿ ಎಂಬುದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಸಾರಾಸಗಟಾಗಿ ಅವರು ಪಕ್ಷವನ್ನು ಬೆಂಬಲಿಸುತ್ತಾರೆ. ಜೊತೆಗೆ ಅಹಿಂದ, ಒಕ್ಕಲಿಗ, ಲಿಂಗಾಯತರು ಕೂಡ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ಬಾಲಕೃಷ್ಣ ಹೇಳಿದರು.

ಅಲ್ಪಸಂಖ್ಯಾತರ ಟಾರ್ಗೆಟ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಪಸಂಖ್ಯಾತರು ಪಕ್ಷದ ಶಕ್ತಿಯಾಗಿದ್ದರೂ ಉಪಚುನಾವಣೆಯಲ್ಲಿ ಏನಾಗಿದೆ ಎಂಬುದನ್ನು ಹೈಕಮಾಂಡ್ ಪರಿಶೀಲನೆ ಮಾಡುತ್ತಿದೆ. ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪೇ. ಈ ಬಗ್ಗೆ ಹೈ ಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಈ ವಿಷಯದಲ್ಲಿ ಕೆಲವರಿಗೆ ನೋವಾಗಿದೆ. ಹಾಗಾಗಿ, ಅವರು ತಮ್ಮ ಅಭಿಪ್ರಾಯ ಹೇಳಿಕೊಳ್ಳುತ್ತಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-18-1745274254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.