ರೋಣ (ಪ್ರಜಾವಾಣಿ ವಾರ್ತೆ): ಮುಂಬರುವ ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಮತ್ತು ಶಾಸಕ ಜಿ.ಎಸ್.ಪಾಟೀಲ ಹೇಳಿದರು.

ಶುಕ್ರವಾರ ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಭಾಭವನದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮೋಹನ ಲಿಂಬಿಕಾಯಿ ಕಾರ್ಮಿಕರ ಮತ್ತು ಪದವೀಧರರ ಪರ ಹೋರಾಟಗಾರರಾಗಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿದ್ದಾರೆ. ವಿಧಾನ ಪರಿಷತ್ ಪಶ್ಚಿಮ ಪದವೀಧರ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಘೋಷಿಸಿದ್ದು, ಮುಖಂಡರು ಕಾರ್ಯಕರ್ತರು ಅವರನ್ನು ಗೆಲ್ಲಿಸಲು ಹೆಚ್ಚಿನ ನೋಂದಾಯಿತ ಪದವೀಧರ ಮನ ಒಲಿಸುವ ಕಾರ್ಯ ಮಾಡಬೇಕು ಎಂದರು.

ಪಶ್ಚಿಮ ಪದವೀಧರ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮಾತನಾಡಿ, ಪದವೀಧರ ಮತದಾನ ಹಕ್ಕಿಗಾಗಿ ಸಾಕಷ್ಟು ಜನರನ್ನು ನೋಂದಾಯಿಸಲಾಗಿದೆ. ಬಾಕಿ ಉಳಿದಿರುವ ಪದವೀಧರ ನೋಂದಣಿ ಮಾಡಿಸಬೇಕು. ಪದವೀಧರ ಅಭಿವೃದ್ಧಿಗಾಗಿ ಹಾಗೂ ಸಮಸ್ಯೆ ಪರಿಹರಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.

ಕೆ.ಸಿ.ಸಿ.ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ, ವೀರಣ್ಣ ಶೆಟ್ಟರ, ಶರಣಪ್ಪ ಬೇಟಗೇರಿ, ಡಿ.ಡಿ.ಮೊರನಾಳ, ಡಾ. ಕೆ.ಬಿ. ಧನ್ನೂರ, ವಿ.ಬಿ. ಸೋಮನಕಟ್ಟಿಮಠ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-23-1797856400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.