ಸಕಲೇಶಪುರ: ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಭಾರತೀಯರ ಗೆಲುವು’ ಎಂದು ಶಾಸಕ ಸಿಮೆಂಟ್ ಮಂಜು ಬಣ್ಣಿಸಿದರು.

ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದಚೇರಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರೊಂದಿಗೆ ಸೋಮವಾರ ಸಂಜೆ ವಿಜಯೋತ್ಸವ ಆಚರಿಸಿ ಮಾತನಾಡಿದರು.

‘ಸ್ವಾತಂತ್ರ್ಯ ಬಂದ ನಂತರ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಹಿಡಿದೆದೆ. ಸುಮಾರು 15 ವರ್ಷಗಳ ಕಾಲ ಆಡಳಿತ ನಡೆಸಿದ ಮಮತಾ ಬ್ಯಾನರ್ಜಿ ಅವರ ಪಕ್ಷದ ಗೂಂಡಾಗಳು ಹಲವಾರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಆದರೂ ಗೂಂಡಾಗಿರಿಗೆ ಹೆದರದೆ ಪಕ್ಷವನ್ನು ಸಂಘಟನೆ ಮಾಡಿದ ಪರಿಣಾಮ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದೆ’ ಎಂದರು.

‘ಕೇರಳದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಮೂರು ಸ್ಥಾನಗಳನ್ನು ಗಳಿಸಿದೆ. ಒಟ್ಟಾರೆ ದೇಶದಾದ್ಯಂತ ರಾಷ್ಟ್ರೀಯವಾದ ಚಿಂತನೆ ಜನರಲ್ಲಿ ಹುಟ್ಟುತ್ತಿದ್ದು, ಇದರಿಂದ ಬಿಜೆಪಿಯನ್ನು ಜನ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಬದಲಾವಣೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ತಿಳಿಸಿದರು.

ಹಳೇ ಬಸ್ ನಿಲ್ದಾಣದಲ್ಲಿ ಚುರುಮುರಿ ಹಾಗೂ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಟಿಎಪಿಸಿಎಂಎಸ್ ಅಧ್ಯಕ್ಷ ಶಶಿಕುಮಾರ್, ಆಟೋ ರವಿ, ವನಜಾಕ್ಷಿ, ಪ್ರದೀಪ್, ಮೇಘರಾಜ್, ಇಂದನ್, ಆಶೀರ್ವಾದ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-1525685413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.