ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 4 ಮೇ 2024, 23:18 IST
Last Updated 4 ಮೇ 2024, 23:18 IST
ಅಕ್ಷರ ಗಾತ್ರ

ಈ ಬಾರಿ ಕೇರಳದ ವಯನಾಡ್‌ ಕ್ಷೇತ್ರದಲ್ಲಿ ಸೋಲುವ ಭೀತಿ ಇರುವುದರಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೇಠಿಯ ಬದಲು ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ. ಅಲ್ಲಿ ಅವರು ಭಾರಿ ಮತಗಳ ಅಂತರದಿಂದ ಸೋಲಲಿದ್ದಾರೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಮೀಸಲಾತಿಯನ್ನು ರದ್ದು ಪಡಿಸಲಿದ್ದಾರೆ ಎಂದು ‘ರಾಹುಲ್‌ ಬಾಬಾ ಮತ್ತು ಕಂಪನಿ’ ಅಪಪ್ರಚಾರ ಮಾಡುತ್ತಿದೆ. ಕೆಲವು ರಾಜ್ಯಗಳಲ್ಲಿ ‘ಇಂಡಿಯಾ’ ಒಕ್ಕೂಟವು ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗದವರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಿದೆ

ಅಮಿತ್‌ ಶಾ, ಕೇಂದ್ರ ಗೃಹಸಚಿವ

ಪಕ್ಷದ ಚುನಾವಣಾ ಕಾರ್ಯತಂತ್ರದ ಭಾಗವಾಗಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬಿಜೆಪಿ ಮುಖಂಡರು ಭಯಗೊಂಡಿದ್ದಾರೆ. ರಾಹುಲ್‌ ಅವರು ಉತ್ತರ ಪ್ರದೇಶದಿಂದ ಮೂರು ಬಾರಿ ಮತ್ತು ಕೇರಳದಿಂದ ಒಮ್ಮೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಉತ್ತರದಲ್ಲಿ ಮತ್ತು ದಕ್ಷಿಣದಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಅವರಿಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಡಿಶಾ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕರ್ನಾಟಕದಿಂದ ಸ್ಪರ್ಧಿಸುವ ಧೈರ್ಯ ಇದೆಯೇ? ಈ ರಾಜ್ಯಗಳ ಜನರು ಭಾರತದವರಲ್ಲವೇ? 

ಸುಪ್ರಿಯಾ ಶ್ರೀನೆತ್‌, ಕಾಂಗ್ರೆಸ್‌ ನಾಯಕಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT