ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ನಂತರ ಬಿಜೆಪಿಯ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದ ನಂತರ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಮಧ್ಯೆ ರಾಜಕೀಯ ಜಟಾಪಟಿ ತೀವ್ರಗೊಂಡಿದೆ.

ಇದರ ಬೆನ್ನಲ್ಲೇ ಜಂಟಿ ಮಾಧ್ಯಮಗೋಷ್ಠಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ತಪ್ಪು ಎಸಗಿರುವ ಜೀವರಾಜ್ ಮತ್ತು ಚುನಾವಣಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣಾ ವೀಕ್ಷಕರ ಅನುಮತಿ ಪಡೆಯದೆ ಮತ್ತು ನ್ಯಾಯಾಲಯದ ಗಮನಕ್ಕೂ ತರದೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ತರಾತುರಿಯಲ್ಲಿ ಘೋಷಣೆ ಮಾಡಿದ್ದಾರೆ. ಈ ಎಲ್ಲದರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಜೀವರಾಜ್ ಅವರು ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದ್ದರೂ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಈವರೆಗೂ ಅವಕಾಶ ನೀಡಿಲ್ಲ ಎಂದು ಆರೋಪಿಸಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ದೂರು ಸಲ್ಲಿಸಿದೆ. ಜೀವರಾಜ್ ಅವರಿಗೆ ನೀವೇ ಪ್ರಮಾಣ ವಚನ ಬೋಧಿಸಬೇಕು ಎಂದು ರಾಜ್ಯಪಾಲರಿಗೆ ನಿಯೋಗ ಮನವಿ ಮಾಡಿದೆ.

ಈ ಮಧ್ಯೆಯೇ, ಮತಗಳನ್ನು ತಿರುಚಿದ ಆರೋಪ ಆಧರಿಸಿ ಡಿ.ಎನ್.ಜೀವರಾಜ್ ಹಾಗೂ ಅಂದಿನ ಚುನಾವಣಾಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅದಕ್ಕೆ ಹೈಕೋರ್ಟ್ ತಡೆ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-2014835607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.