ನರಸಿಂಹರಾಜಪುರ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಬದಲಾದ ಫಲಿತಾಂಶವು ಚುನಾವಣಾ ಇತಿಹಾಸದಲ್ಲೆ ಕಪ್ಪು ಚುಕ್ಕೆಯಾಗಿದೆ ಎಂದು ಮುತ್ತಿನಕೊಪ್ಪ ಜನಜಾಗೃತಿ ವೇದಿಕೆಯ ಅಧ್ಯಕ್ಷ ಚಬ್ಬೆನಾಡು ಸಿ.ಎಲ್. ಮನೋಹರ್ ಅಭಿಪ್ರಾಯಪಟ್ಟಿದ್ದಾರೆ.

‘ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಆಗಿರುವ ಬದಲಾವಣೆ ಒಂದು ರೀತಿಯ ಮತ ಡಕಾಯಿತಿ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ‘ ಎಂದು ಆರೋಪಿಸಿದ್ದಾರೆ.

2023ರಲ್ಲಿ ಪ್ರಕಟಗೊಂಡ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರನ್ನು ಶಾಸಕರಾಗಿ ಘೋಷಿಸಲಾಗಿತ್ತು. ಆದರೆ, ಈಗ ಅದೇ ಚುನಾವಣಾ ಆಯೋಗ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು ಶಾಸಕರಾಗಿ ಘೋಷಿಸಿರುವುದು ಚುನಾವಣಾ ವ್ಯವಸ್ಥೆಯ ಲೋಪವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

ಎಲ್ಲಾ ಪಕ್ಷಗಳ ಚುನಾವಣಾ ಏಜೆಂಟರು ಇದ್ದರೂ 2023ರಲ್ಲಿ 259 ಅಮಾನ್ಯ ಮತಗಳನ್ನು ಗುರುತಿಸದೇ ಹೋಗಿರುವುದು ಏಕೆ ಎಂದು ಪ್ರಶ್ನಿಸಿರುವ ಅವರು, ಇದಕ್ಕೆ ಕಾರಣರಾದ ಚುನಾವಣಾ ಅಧಿಕಾರಿಗಳು ಯಾರು, ಅದರ ಹಿಂದೆ ಇರುವ ರಾಜಕೀಯ ನಾಯಕರು ಯಾರು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಂದು ಮಾನ್ಯಗೊಂಡಿದ್ದ ಮತಗಳು ಈಗ ಅಮಾನ್ಯವಾಗಲು ಕಾರಣವಾದ ಅಧಿಕಾರಿ ಯಾರು ಹಾಗೂ ಅದರ ಹಿಂದೆ ಯಾರು ಇದ್ದಾರೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು. ವಿಧಾನಸಭೆಯ ಚುನಾವಣೆಯ ಫಲಿತಾಂಶವನ್ನೇ ತಿರುಚುವ ಹಂತಕ್ಕೆ ಚುನಾವಣಾ ಆಯೋಗ ಬಂದಿದ್ದರೆ, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳ ಪಾರದರ್ಶಕತೆಯ ಸ್ಥಿತಿ ಏನಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಡಿ.ಎನ್. ಜೀವರಾಜ್ ಅವರು ಟಿ.ಡಿ.ರಾಜೇಗೌಡ ಅವರ ಚುನಾವಣಾ ಫಲಿತಾಂಶ ಬದಲಿಸುವಷ್ಟು ಪ್ರಭಾವ ಹೊಂದಿದ್ದರೆ, ದೇಶ ಹಾಗೂ ರಾಜ್ಯ ಮಟ್ಟದ ಚುನಾವಣಾ ಫಲಿತಾಂಶಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಅನುಮಾನ ಮೂಡುತ್ತದೆ ಎಂದು ಹೇಳಿದ್ದಾರೆ.

ಇಲ್ಲಿ ಮತ ಡಕಾಯಿತಿ ನಡೆದಿರುವುದು ಸತ್ಯ. ಆದರೆ, ಅದು ಯಾವಾಗ, ಯಾರಿಂದ ನಡೆದಿದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಕ್ಷೇತ್ರದ ಮತದಾರರದ್ದು. ಚುನಾವಣಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಉಳಿಸುವುದು ಚುನಾವಣಾ ಆಯೋಗ ಹಾಗೂ ಸರ್ಕಾರಗಳ ಕರ್ತವ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳು ಕಾಲಮಿತಿಯೊಳಗೆ ತನಿಖೆ ನಡೆಸಿ, ಮತ ಬದಲಾವಣೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಈ ಬೆಳವಣಿಗೆ ಪ್ರಜಾಪ್ರಭುತ್ವದ ಅಣಕ ಆಗಲಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1932797126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.