ಚೆನ್ನೈ: ತಮಿಳುನಾಡಿನಲ್ಲಿ ಸರಳ ಬಹುಮತಕ್ಕೆ ಕೇವಲ 12 ಸ್ಥಾನಗಳ ಕೊರತೆ ಎದುರಿಸುತ್ತಿರುವ ಟಿವಿಕೆ ನಾಯಕ ಸಿ. ಜೋಸೆಫ್ ವಿಜಯ್ ಅವರಿಗೆ ಮುಂದಿನ ಸರ್ಕಾರ ರಚಿಸಲು ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಯ ಇತರ ಮಿತ್ರ ಪಕ್ಷಗಳು ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಯಲ್ಲಿ ಕಾಂಗ್ರೆಸ್ ಐದು ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ವಿಸಿಕೆ, ಸಿಪಿಐ (ಎಂ), ಸಿಪಿಐ, ಡಿಎಂಡಿಕೆ ಮತ್ತು ಐಯುಎಂಎಲ್ ತಲಾ ಎರಡು ಕ್ಷೇತ್ರಗಳಲ್ಲಿ ವಿಜಯ ಸಾಧಿಸಿವೆ. ಈ ಆರು ಪಕ್ಷಗಳು ಒಟ್ಟು 15 ಕ್ಷೇತ್ರಗಳಲ್ಲಿ ಗೆದ್ದಿವೆ. ಹೀಗಾಗಿ ರಾಜ್ಯದಲ್ಲಿ ಈಗ ಎಲ್ಲರ ಗಮನ ಈ ಪಕ್ಷಗಳತ್ತ ನೆಟ್ಟಿದೆ. ಟಿವಿಕೆ ನಾಯಕ ವಿಜಯ್ ಅವರ ಅದ್ಭುತ ಗೆಲುವಿಗೆ ಅಭಿನಂದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಪಕ್ಷಕ್ಕೆ ಬೆಂಬಲ ನೀಡುವ ಸುಳಿವು ನೀಡಿದ್ದಾರೆ.

‘ಈ ಜನಾದೇಶವು ಯವ ಜನರ ಧ್ವನಿಯನ್ನು ಬಿಂಬಿಸುತ್ತದೆ. ಅದನ್ನು ನಿರ್ಲಕ್ಷಿಸಲಾಗುವುದಿಲ್ಲ’ ಎಂದು ರಾಹುಲ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚುನಾವಣೆಗೂ ಮುನ್ನ ರಾಹುಲ್ ಅವರು ಟಿವಿಕೆ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಒಲವು ತೋರಿದ್ದರು. ಆದರೆ ಡಿಎಂಕೆ ಮೈತ್ರಿ ಜತೆ ಮುಂದುವರಿಯುವ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ಧಾರ ಮೇಲುಗೈ ಸಾಧಿಸಿತ್ತು. ಚುನಾವಣಾ ಪ್ರಚಾರದ ವೇಳೆ ರಾಹುಲ್ ಅವರು ಸ್ಟಾಲಿನ್ ಅವರ ಜತೆ ವೇದಿಕೆ ಹಂಚಿಕೊಂಡಿರಲಿಲ್ಲ. ಇದು ಮೈತ್ರಿಯಲ್ಲಿ ಗೊಂದಲಗಳನ್ನು ಬಹಿರಂಗಪಡಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-845203308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.