ಚೆನ್ನೈ: ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ), ಇತರ ಕೆಲ ಪಕ್ಷಗಳ ಜತೆಗೂಡಿ ‘ಮ್ಯಾಜಿಕ್ ಸಂಖ್ಯೆ’ 118ರ ಸನಿಹ ತಲುಪಿದರೂ ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಯ ಕುರಿತ ಗೊಂದಲ ಮುಂದುವರಿದಿದೆ.

ಸಿಪಿಐ ಮತ್ತು ಸಿಪಿಎಂ ಪಕ್ಷಗಳು ಟಿವಿಕೆಗೆ ಶುಕ್ರವಾರ ಅಧಿಕೃತವಾಗಿ ತಮ್ಮ ಬೆಂಬಲ ಘೋಷಿಸಿದವು. ವಿಡುದಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಕೂಡಾ ವಿಜಯ್ ಅವರನ್ನು ಬೆಂಬಲಿಸುವ ಸೂಚನೆ ನೀಡಿದೆ. ಆದರೆ ಶನಿವಾರವಷ್ಟೇ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.

ಎಡ ಪಕ್ಷಗಳು ಬೆಂಬಲ ಘೋಷಿಸಿದ ಕೆಲ ಗಂಟೆಗಳ ಬಳಿಕ ವಿಜಯ್ ಅವರು ಸರ್ಕಾರ ರಚನೆಗೆ ಆಹ್ವಾನ ಪಡೆಯುವ ಸಂಬಂಧ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರನ್ನು ಭೇಟಿಯಾದರು. ವಿಜಯ್ ಅವರು 116 ಶಾಸಕರ ಬೆಂಬಲ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಆದರೆ ಸರಳ ಬಹುಮತಕ್ಕೆ ಅಗತ್ಯವಿರುವ 118 ಶಾಸಕರ ಬೆಂಬಲದೊಂದಿಗೆ ಬರುವಂತೆ ರಾಜ್ಯಪಾಲರು ವಿಜಯ್ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

‘ಶನಿವಾರ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸುವಂತೆ ವಿಜಯ್ ಅವರು ರಾಜ್ಯಪಾಲರನ್ನು ಕೋರಿದ್ದಾರೆ. ಆದರೆ, ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಇರುವುದನ್ನು ತೋರಿಸುವಂತೆ ರಾಜ್ಯಪಾಲರು ಪಟ್ಟು ಹಿಡಿದಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಸರಳ ಬಹುಮತಕ್ಕೆ 10 ಸ್ಥಾನಗಳ ಕೊರತೆ ಎದುರಿಸಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ವಿಜಯ್ ಅವರು ಒಂದು ಸ್ಥಾನ ಬಿಟ್ಟುಕೊಡಬೇಕಿರುವುದರಿಂದ ಟಿವಿಕೆಯ ಬಲ 107 ಆಗಿದೆ.

ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಈ ಹಿಂದೆಯೇ ಟಿವಿಕೆಗೆ ಬೆಂಬಲ ಘೋಷಿಸಿದೆ. ಇದೀಗ ತಲಾ ಎರಡು ಸ್ಥಾನಗಳನ್ನು ಗೆದ್ದಿರುವ ಸಿಪಿಎಂ ಮತ್ತು ಸಿಪಿಐನ ಬೆಂಬಲದೊಂದಿಗೆ ಟಿವಿಕೆಯ ಬಲ 116ಕ್ಕೆ ಏರಿಕೆಯಾಗಿದೆ. ಬಹುಮತಕ್ಕೆ ಇನ್ನೆರಡು ಸ್ಥಾನಗಳು ಬೇಕಿದ್ದು, ವಿಸಿಕೆಯ ಬೆಂಬಲ ದೊರೆತರೆ ವಿಜಯ್ ಅವರಿಗೆ ಸರ್ಕಾರ ರಚಿಸಲು ಸಾಧ್ಯವಾಗಲಿದೆ.

ಎರಡು ಸ್ಥಾನ ಜಯಿಸಿರುವ ವಿಸಿಕೆ, ಟಿವಿಕೆಗೆ ಬೆಂಬಲ ನೀಡುವ ಕುರಿತು ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಪಕ್ಷದ ಮುಖ್ಯಸ್ಥ ತೊಲ್ ತಿರುಮಾವಳವನ್ ಅವರು, ‘ಎಡಪಕ್ಷಗಳು ಅನುಸರಿಸುವ ಮಾರ್ಗವನ್ನು ವಿಸಿಕೆ ಅನುಸರಿಸಲಿದೆ’ ಎಂದು ಹಲವು ಬಾರಿ ಹೇಳಿದ್ದಾರೆ.

ಇಬ್ಬರು ಶಾಸಕರನ್ನು ಹೊಂದಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಮೊದಲು ಟಿವಿಕೆಗೆ ಬೆಂಬಲ ಘೋಷಿಸಿ ಆ ನಂತರ ತನ್ನ ನಿರ್ಧಾರ ಬದಲಿಸಿತು. ‘ಟಿವಿಕೆ ಸರ್ಕಾರವನ್ನು ಬೆಂಬಲಿಸುವುದಿಲ್ಲ. ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಮುಂದುವರಿಯತ್ತೇವೆ’ ಎಂದು ಐಯುಎಂಎಲ್ ಮುಖಂಡರು ಸ್ಪಷ್ಟಪಡಿಸಿದರು.

ಬಿಜೆಪಿಯನ್ನು ದೂರವಿಡುವುದು ಗುರಿ: ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಮತ್ತು ಸಿಪಿಐ ರಾಜ್ಯ ಕಾರ್ಯದರ್ಶಿ ಎಂ. ವೀರಪಾಂಡ್ಯನ್ ಅವರು ಟಿವಿಕೆಗೆ ಬೇಷರತ್ ಬೆಂಬಲ ಘೋಷಿಸಿದರು.

ತಮಿಳುನಾಡಿಗೆ ಬಿಜೆಪಿಯ ‘ಹಿಂಬಾಗಿಲ ಪ್ರವೇಶ’ವನ್ನು ತಡೆಯಲು ಟಿವಿಕೆಯನ್ನು ಬೆಂಬಲಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು. ಚುನಾವಣೆಯಲ್ಲಿ ಸೋತರೂ ರಾಜ್ಯಪಾಲರ ಮೂಲಕ ರಾಜ್ಯವನ್ನು ಆಳುವ ಪ್ರಯತ್ನಕ್ಕೆ ಬಿಜೆಪಿ ಯತ್ನಿಸಿದ್ದು, ಅದನ್ನು ತಡೆಯುವುದು ನಮ್ಮ ಉದ್ದೇಶವಾಗಿತ್ತು ಎಂದು ಷಣ್ಮುಗಂ ಹೇಳಿದ್ದಾರೆ.

‘10 ದಿನಗಳಲ್ಲಿ ಯಾವುದೇ ಸರ್ಕಾರ ರಚನೆಯಾಗದಿದ್ದರೆ, ರಾಜ್ಯಪಾಲರ ಆಡಳಿತವನ್ನು ಹೇರುವುದಕ್ಕೆ ಹಾದಿಯೊದಗಿಸಬಹುದು. ಟಿವಿಕೆಗೆ ಬೆಂಬಲ ನೀಡಿದರೂ ಎಡಪಕ್ಷಗಳು ಡಿಎಂಕೆಯೊಂದಿಗಿನ ಮೈತ್ರಿಯನ್ನು ಮುಂದುವರಿಸುತ್ತವೆ’ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ಗೆ ಎರಡು ಸಚಿವ ಸ್ಥಾನ: ಕಾಂಗ್ರೆಸ್ ಪಕ್ಷವು ಟಿವಿಕೆ ಸರ್ಕಾರದ ಭಾಗವಾಗಲಿದೆ ಎಂದು ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್ಸಿಸಿ) ಅಧ್ಯಕ್ಷ ಕೆ.ಸೆಲ್ವಪೆರುಂದಗೈ ಹೇಳಿದ್ದಾರೆ. ಎರಡು ಸಚಿವ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನ ಕಾಂಗ್ರೆಸ್ಗೆ ಸಿಗಲಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-1442173000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.